ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೇ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ

IMG-20250502-WA0250.jpg
Published on

ಚಿಕ್ಕಬಳ್ಳಾಪುರ: ರಾಷ್ಟೀಯ ಹೆದ್ದಾರಿ 69 ನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆರಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಚರ್ಚೆ ನಡೆದಿದೆ.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ಮಾರ್ಗದಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವ ಹಾಲಿ ರಸ್ತೆಯ ವಿಸ್ತರಣೆ, ಬಳಿಕ ್ಲೆ$ ಓವರ್ ನಿರ್ಮಿಸುವುದು, ರಸ್ತೆ ಸಾರಿಗೆಗೆ ಅನುಕೂಲದ ಜತೆಗೆ ಸೇತುವೆಯ ಕೆಳಗೆ ರೈಲು ಸಾಗಾಟಕ್ಕೂ ಪೂರಕವಾಗುವ ಕಾಮಗಾರಿ ಕೈಗೊಳ್ಳಲು ರೈಲ್ವೆ ಇಲಾಖೆಯ ಸಮನ್ವಯದೊಂದಿಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 69 ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ  ತಾಲೂಕುಗಳ ಮೂಲಕ ಹಾದು ಹೋಗಿದ್ದು ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರ ನಗರಗಳಲ್ಲಿ ಬೈ ಪಾಸ್ ನಿರ್ಮಿಸಬೇಕಾಗಿದೆ. ಹಾಲಿ ಇರುವ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಕೇಂದ್ರ ಸರ್ಕಾರ  ಮಂಜೂರು ಮಾಡಿದೆ. ಈ ಕಾಮಗಾರಿಗೆ 3 ಸಾವಿರ ಕೋಟಿ ವೆಚ್ಚ ಆಗಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿ.ಪಂ.ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ ಎನ್  ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net