

ಕುಂದಾಪುರ: ರೈಲ್ವೆ ಸೇವೆಗಳಿಂದ ಸಾವಾನ್ಯ ಜನರಿಗೆ ಹೆಚ್ಚು ಅನುಕೂಲವಾಗಿದ್ದು, ರೈಲ್ವೆ ಸೇವೆಗಳು ಇನ್ನಷ್ಟು ಪರಿಣಾಮಕಾರಿಯಾಗಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಉತ್ತಮ ಸಲಹೆಗಳು ಬಂದರೆ ಜನಪ್ರತಿನಿಧಿಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ವಾಡಲು ಸಾಧ್ಯವಾಗುತ್ತದೆ. ಮಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಹಂಗಳೂರು ಲಯನ್ಸ್ ಕ್ಲಬ್ ವತಿಯಿಂದ 60 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡ ಕುಂದಾಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ, ನೂತನ ಮೇಲ್ಛಾವಣಿ ಹಾಗೂ ಉದ್ಯಾನವನವನ್ನು ಶನಿವಾರ ಉದ್ಘಾಟಿಸಿ ವಾತನಾಡಿದರು. ನಿಲ್ದಾಣ ಇನ್ನಷ್ಟು ಅಭಿವೃದ್ಧಿ: ಕುಂದಾಪುರ ಶಾಸಕ ಕಿರಣ್‌ಕುವಾರ್ ಕೊಡ್ಗಿ ವಾತನಾಡಿ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ವಾಡುವ ಬಗ್ಗೆ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಚಿವರನ್ನು ಭೇಟಿ ವಾಡಿ ಚರ್ಚಿಸಲಾಗಿದೆ. ವಿಧಾನಸಭೆಯಲ್ಲಿ ಕೂಡ ಎಲ್ಲ ಶಾಸಕರು ಒಟ್ಟಾಗಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಸಲಾಗಿದೆ. ಕುಂದಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ ಎಂದರು. ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ರೋವನ್ ಡಿಕೋಸ್ತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ದೇಣಿಗೆ ನೀಡಿದ ಎಂ.ಮಹೇಶ ಹೆಗ್ಡೆ, ಗಣೇಶ ರಾವ್, ಮಹೇಂದ್ರ ಶೆಟ್ಟಿ, ಹಂಸರಾಜ ಶೆಟ್ಟಿ, ಹರಿಪ್ರಸಾದ ರೈ, ಜೋನ್ಸನ್ ಡಿಅಲ್ಮೇಡಾ, ಕೆ.ಬಾಲಚಂದ್ರ ಶೆಟ್ಟಿ, ಅರುಣ್‌ಕುವಾರ್ ಹೆಗ್ಡೆ, ಫಿಲಿಪ್ ಡಿಕೋಸ್ತಾ, ರವಿಕಿರಣ್ ಡಿಕೋಸ್ತಾ, ರಜತ್ ಕುವಾರ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ರೋವನ್ ಡಿಕೋಸ್ತಾ ಅವರನ್ನು ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿ ವತಿಯಿಂದ ಗೌರವಿಸಲಾಯಿತು. ಲಯನ್ಸ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್, ಕೊಂಕಣ ರೈಲ್ವೆ ಸಲಹಾ ಸಮಿತಿ ಸದಸ್ಯ ಗಣೇಶ್ ಪುತ್ರನ್, ಲಯನ್ಸ್ ಜಿಲ್ಲಾ ಪ್ರಥಮ ಉಪ ಗವರ್ನರ್ ಸಪ್ನಾ ಸುರೇಶ, ಜಿಲ್ಲಾ ದ್ವಿತೀಯ ಉಪ ಗವರ್ನರ್ ರಾಜೀವ ಕೋಟ್ಯಾನ್, ಜಿಲ್ಲಾ ದ್ವಿತೀಯ ಉಪ ಗವರ್ನರ್ ಎಲೆಕ್ಟ್ ಹರಿಪ್ರಸಾದ್ ರೈ, ಲಯನ್ಸ್ ಜಿಲ್ಲಾ ಅಂಬಾಸಿಡರ್ ಬಿ.ಅರುಣ್ ಕುವಾರ್ ಹೆಗ್ಡೆ, ರೀಜನ್ ಚೇರ್ಮನ್ ಬಿ.ಸೋಮನಾಥ ಹೆಗ್ಡೆ, ಕಂದಾವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನುಪವಾ ಶೆಟ್ಟಿ, ಹಂಗಳೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ವ್ಯಾಥ್ಯೂ ಜೋಸೆಫ್, ಕೋಶಾಧಿಕಾರಿ ಪುನೀತ್ ಶೆಟ್ಟಿ ಉಪಸ್ಥಿತರಿದ್ದರು. ರೋವನ್ ಡಿಕೋಸ್ತಾ ಸ್ವಾಗತಿಸಿದರು. ಎಚ್.ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರೇಟ್ಟಾ ಡಿಕೋಸ್ತಾ ನಿರೂಪಿಸಿದರು.
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ವಾಡಿದರೆ ಡಬ್ಲಿಂಗ್, ಸುಸಜ್ಜಿತ ರೈಲು ನಿಲ್ದಾಣ ಸಹಿತ ಎಲ್ಲ ವ್ಯವಸ್ಥೆ ನೀಡಲು ಸಾಧ್ಯ. ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪಾಲು ಕೊಂಕಣ ರೈಲ್ವೆಯಲ್ಲಿದ್ದು ಆ ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ರಾಜ್ಯ ಸರ್ಕಾರ ಕೂಡ ಸಮ್ಮತಿ ಸೂಚಿಸಿದೆ. ಬೆಂಗಳೂರಿಗೆ ಹೆಚ್ಚುವರಿ ರೈಲು ನೀಡಲು ಪ್ರಯತ್ನಿಸಲಾಗುತ್ತಿದೆ. ಪ್ರಯಾಣಿಕರ ದಟ್ಟಣೆ ನೀಗಿಸಲು ಪಂಚಗಂಗಾವಳಿ ರೈಲಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ, ಸಂಸದ