ರಾಜ್ಯಪಾಲರ ವಿರುದ್ಧ ಮನವಿ

manavi
ಬೆಳ್ತಂಗಡಿ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ತಾಲೂಕು ಕಚೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ನೀಡುತ್ತಿರುವುದು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಚೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಿಣ ಬ್ಲಾಕ್ ಅಧ್ಯಕ್ಷ ನಾಗೇಶ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ಮಹಿಳಾ ಕಾಂಗ್ರೆಸಿನ ಸದಸ್ಯರು, ಯುವ ಕಾಂಗ್ರೆಸಿನ ಸದಸ್ಯರು, ಎನ್.ಎಸ್.ಯು.ಐ ಮತ್ತು ಎಲ್ಲ ಮುಂಚೂಣಿ ಘಟಕದವರು ಭಾಗವಹಿಸಿದರು. ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net