ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಒಬ್ಬ ಮಹಿಳೆಯನ್ನು ಬಂಧಿಸಿದ್ದು, ಮೂವರನ್ನು ರಕ್ಷಣೆ ಮಾಡಿದ್ದಾರೆ.
ನಗರದ ಮೃಗಾಲಯ ರಸ್ತೆಯಲ್ಲಿರುವ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜೂ.19 ರಂದು ಪೊಲೀಸರು ದಾಳಿ ನಡೆಸಿದ್ದರು. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.