ಗೋಮಾಳ ರಕ್ಷಣೆ ಮಾಡಿ

ಗೋಮಾಳ ಭೂಮಿ ರಕ್ಷಿಸುವಂತೆ ಒತ್ತಾಯಿಸಿ ಮಲ್ಲೇಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥರಾದ ನಾರಾಯಣಸ್ವಾಮಿ, ಮುನಿರಾಜ ,ಮುನಿಶಾಮಪ್ಪ ಮತ್ತಿತರರಿದ್ದರು.
ಗೋಮಾಳ ಭೂಮಿ ರಕ್ಷಿಸುವಂತೆ ಒತ್ತಾಯಿಸಿ ಮಲ್ಲೇಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥರಾದ ನಾರಾಯಣಸ್ವಾಮಿ, ಮುನಿರಾಜ ,ಮುನಿಶಾಮಪ್ಪ ಮತ್ತಿತರರಿದ್ದರು.
Published on

ಚನ್ನರಾಯಪಟ್ಟಣ: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಮಲ್ಲೇಪುರದಲ್ಲಿ ಗೋಮಾಳ ಜಮೀನಿನ ರಕ್ಷಣೆಗಾಗಿ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

ಮಲ್ಲೇಪುರದಲ್ಲಿ 40 ವರ್ಷಗಳಿಂದ ಭೂಸ್ವಾಧೀನದಲ್ಲಿದ್ದು ಸರ್ಕಾರಿ ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡು ವ್ಯವಸಾಯ ಮಾಡುತ್ತಾ ಬದುಕು ಕಟ್ಟಿಕೊಂಡಿದ್ದ 150ಕ್ಕೂ ಹೆಚ್ಚು ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಕೋಟ್ಯಂತರ ರೂ. ಮೌಲ್ಯದ ಭೂಮಿ ಕಬಳಿಸಲು ಮುಂದಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂದೇಶ್ ಆಕ್ರೋಶ ವ್ಯಕ್ತಪಡಿಸಿದರು.

ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಅಧಿಕಾರಿಗಳೊಂದಿಗೆ ಶಾಮೀಲಾಗಿ ಕೆಲವು ವ್ಯಕ್ತಿಗಳ ಹೆಸರಿಗೆ ದಾಖಲೆ ಮಾಡಿರುವುದು ಅಕ್ಷೇಪಾರ್ಹ. 16.34 ಗುಂಟೆ ಜಮೀನಿನ ಅಕ್ರಮ ದಾಖಲೆ ಸೃಷ್ಟಿ ಮಾಡಿರುವುದನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮದ ಮುಖಂಡ ಎಂ.ಡಿ.ರಾಮಾಂಜಿನಪ್ಪ ಮಾತನಾಡಿ, ಬಲಾಢ್ಯರು ಮತ್ತು ಅಧಿಕಾರಿಗಳು ಒಟ್ಟಾಗಿ ಜಾಗವನ್ನು ಕಬಳಿಸಲು ಕಾನೂನಿಗೆ ವಿರುದ್ಧವಾದ ಹಾದಿ ಬಳಸುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರು ಗಮನಹರಿಸಿ ಗ್ರಾಮದ ಭೂಸ್ವಾಧೀನದಲ್ಲಿರುವವರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕದಿರಪ್ಪ ಮಾತನಾಡಿ, ಸುಮಾರು 40 ವರ್ಷದಿಂದ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವ್ಯವಸಾಯ ಮಾಡುತ್ತಿದ್ದ ಗ್ರಾಮಸ್ಥರಿಗೆ ಅನ್ಯಾಯವಾಗುತ್ತಿದೆ, ಕೆಂಪೇಗೌಡ ವಿಮಾನ ನಿಲ್ದಾಣದ ಕೂದಲೆಳೆ ಅಂತರದಲ್ಲಿರುವ ಮಲ್ಲೇಪುರ ಗ್ರಾಮದಲ್ಲಿನ ಭೂಮಿ ಕಬಳಿಸಲು ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net