

ಮಡಿಕೇರಿ: ಜಿಲ್ಲೆ ತನ್ನದೆಯಾದ ಪ್ರಕೃತಿ ಸೌಂದರ್ಯ, ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ನಾಡಿನ ಜನತೆ ಇಲ್ಲಿನ ಪ್ರಕೃತಿ ಹಾಗೂ ಸಂಸ್ಕೃತಿ-ಸಂಪ್ರದಾಯಗಳನ್ನು ಸಂರಕ್ಷಿಸಿ ಬೆಳೆಸುವಂತಾಗಬೇಕೆಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ತಾಯಿಯ ತವರಿನಲ್ಲಿ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಆಗಮಿಸಿರುವುದು ತನಗೆ ಸಂತೋಷದೊಂದಿಗೆ ಪುಣ್ಯ ಸಿಕ್ಕಿದಂತಾಗಿದೆ. ಮುಂದೆಯೂ ಇಂತಹ ಗ್ರಾಮೀಣ ಕ್ರೀಡಾಕೂಟಗಳು ಯಶಸ್ವಿಯಾಗಿ ಗ್ರಾಮೀಣ ಭಾಗದಲ್ಲಿ ನಡೆಯುವಂತಾಗಲಿ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಉಪಸ್ಥಿತರಿದ್ದರು. ಈ ಸಂದರ್ಭ ದೆಹಲಿಯಲ್ಲಿ ಜರುಗಿದ ೭೯ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಯುವ ರಾಯಭಾರಿಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಮೂರ್ನಾಡಿನ ಯಶಸ್ಸ್ ರೈ ಅವರನ್ನು ಸಂಸದರು ಸನ್ಮಾನಿಸಿ, ಗೌರವಿಸಿದರು.