

ಹುಬ್ಬಳ್ಳಿ : ನಗರದ ಎನ್.ಎಲ್. ಸೊಸೈಟಿಯ ಡಾ. ಆರ್.ಬಿ. ಪಾಟೀಲ ಮಹೇಶ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012ರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಮಾತನಾಡಿ, ಪ್ರತಿಯೊಂದು ಮಗು ಎಲ್ಲ ರೀತಿಯ ಹಿಂಸೆ ನಿರ್ಲಕ್ಷ್ಯ ಮತ್ತು ಶೋಷಣೆಯಿಂದ ರಕ್ಷಣೆ ಹಾಗೂ ಸುರಕ್ಷತೆಯನ್ನು ಹೊಂದುವಂತಹ ವಾತಾವರಣವನ್ನು ಕಲ್ಪಿಪಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಹೇಳಿದರು.
18 ವರ್ಷದೊಳಗಿನ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳು, ಮಾನಸಿಕ ಮತ್ತು ದೈಹಿಕ ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳನ್ನು ತಡೆಗಟ್ಟಿ ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವ ಉದ್ದೇಶದಿಂದ ಪೋಕ್ಸೋ ಕಾಯ್ದೆ 2012 ಅನ್ನು ಭಾರತ ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.
ಕನ್ನಡ ವಿಬಾಗದ ಮುಖ್ಯಸ್ಥ ಐ.ಎಸ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p><p>ಉಪ ಪ್ರಾಚಾರ್ಯ ರಮೇಶ ಹೊಂಬಾಳಿ, ಬಸನಗೌಡ ಪಾಟೀಲ ಹಾಗೂ ಇತರರು ಇದ್ದರು.