ಅಕ್ರಮವಾಗಿ ಸಾಗಿಸುತ್ತಿದ್ದ 20 ಎಮ್ಮೆಗಳ ರಕ್ಷಣೆ

28-RNR-03
Published on

ರಾಣೆಬೆನ್ನೂರ: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಎಮ್ಮೆಗಳನ್ನು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮಾರುಕಟ್ಟೆಯಲ್ಲಿ ಎಮ್ಮೆಗಳನ್ನು ಖರೀದಿಸಿದ ಕೆಲವರು ಅವುಗಳನ್ನು ದಾವಣಗೆರೆ ಕಸಾಯಿಖಾನೆಗೆ ಕಳುಹಿಸಲು ಮುಂದಾಗಿದ್ದರು. ಈ ಕುರಿತು ಮಾಹಿತಿ ತಿಳಿದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಎಮ್ಮೆಗಳನ್ನು ಸಾಗಿಸಲು ತಂದಿದ್ದ ಕಂಟೇನರ್ ಅನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ವಾಹನ ಚಾಲಕ ನಾಪತ್ತೆಯಾಗಿದ್ದನು. ಪೊಲೀಸರು ಕಂಟೇನರ್ ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಎಮ್ಮೆಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು. ಶಹರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net