

ಹುಬ್ಬಳ್ಳಿ: ಬಾಲ ಕಾರ್ವಿುಕ ಮಕ್ಕಳನ್ನು ಎಲ್ಲ್ಲರೂ ಸೇರಿ ಕಾಪಾಡಬೇಕಿದೆ. ಅವರನ್ನು ರಕ್ಷಿಸಿ, ಉತ್ತಮ ಶಿಕ್ಷಣ ನೀಡಬೇಕು. ಸಮಾಜದಲ್ಲಿ ಒಳ್ಳೆಯ ನಾಗರಿಕರನ್ನಾಗಿ ಬೆಳೆಸಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಜಶೇಖರ ತಿಳಗಂಜಿ ಹೇಳಿದರು.
ಇಲ್ಲಿನ ಹೆಗ್ಗೇರಿಯ ಜೆ.ಎಸ್.ಎಸ್ ಸಕ್ರಿ ಕಾನೂನು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ವಿುಕ ವಿರೋಧಿ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ವಿುಕ ವಿರೋಧಿ ದಿನವನ್ನು ಆಚರಿಸಲಾಗುವುದು. ಬಡತನ, ಅನಕ್ಷರತೆಯಿಂದಾಗಿ ಇಂದು ಸಹ ಭಾರತದಲ್ಲಿ ಹಲವಾರು ಮಕ್ಕಳು ಬಾಲ ಕಾರ್ವಿುಕರಾಗಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ದುಡಿಯುತ್ತಿದ್ದರೆ ಅವರನ್ನು ಬಾಲ ಕಾರ್ವಿುಕರು ಎನ್ನಬಹುದು. 16 ವರ್ಷ ಮೇಲ್ಪಟ್ಟ ವಯಸ್ಸಿನವರು ದುಡಿಯುತ್ತಿದ್ದರೆ ಅವರನ್ನು ಕಿಶೋರಾವಸ್ಥೆ ಕಾರ್ವಿುಕರು ಎಂದು ಕರೆಯಲಾಗುತ್ತದೆ ಎಂದು ತಿಳಿಸಿದರು.
ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲ ಕಾರ್ವಿುಕ ಪದ್ಧತಿಯನ್ನು ಹೋಗಲಾಡಿಸಬಹುದು. ಬಾಲ ಕಾರ್ವಿುಕ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರೂ ಮುಂದಾಗಬೇಕು. ಸುತ್ತಮುತ್ತಲಿನ ಪ್ರದೇಶದಲ್ಲಿ ಬಾಲ ಕಾರ್ವಿುಕರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂರ್ಪಸಿ ಮಾಹಿತಿ ನೀಡಬೇಕು. 6 ರಿಂದ 14 ವರ್ಷದೊಳಗಿನ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುವುದು ಅವರ ಹಕ್ಕಾಗಿದೆ ಎಂದು ತಿಳಿಸಿದರು.
ಜೆ.ಎಸ್.ಎಸ್ ಸಕ್ರಿ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಡಾ. ರೂಪಾ ಇಂಗಳಹಳ್ಳಿ ಮಾತನಾಡಿ, ಸಮಾಜದಲ್ಲಿ ದಿನದಿಂದ ದಿನಕ್ಕೆ ಬಾಲ ಕಾರ್ವಿುಕರು ಹೆಚ್ಚಾಗುತ್ತಿದ್ದಾರೆ. ಬಡತನ, ಆರ್ಥಿಕ ಬಿಕ್ಕಟ್ಟು ಇಂತಹ ಅನೇಕ ಕಾರಣಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ನೀಡಿ, ಸಂವಿಧಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆಯ ಮಹಮ್ಮದ ಅಲಿ ತಹಶೀಲ್ದಾರ ಅವರು ಮಾತನಾಡಿದರು.
ಕೆ.ಎಸ್.ಎಲ್.ಯು ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕ ಡಾ. ರಾಜೇಂದ್ರಕುಮಾರ್ ಹಿಟ್ಟಣಗಿ, ಜೆ.ಎಸ್.ಎಸ್ ಸಕ್ರಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಾಬುಲಾಲ್ ದರಗಾದ, ಶಿಶು ಅಭಿವೃದ್ಧಿ ಅಧಿಕಾರಿ ಅತಿಕಾ ಸಿದ್ಧಿ, ಸುರೇಶ್ ಲಿಂಬಿಕಾಯಿ, ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.