ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ಬೆಟ್ಟದಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ರಾಜಶೇಖರ್, ಮಂಜುನಾಥ್, ಪ್ರಶಾಂತ್, ಲಕ್ಷ್ಮೀ, ಪಾಂಡು, ಶ್ರೀನಿಧಿ, ದೇವರಾಜ್, ದೀಪು, ಮುಬೀನಾ, ಮೈಲಾರಿ ಇದ್ದರು.
ಬೆಟ್ಟದಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯನ್ನು ಗಣ್ಯರು ಉದ್ಘಾಟಿಸಿದರು. ರಾಜಶೇಖರ್, ಮಂಜುನಾಥ್, ಪ್ರಶಾಂತ್, ಲಕ್ಷ್ಮೀ, ಪಾಂಡು, ಶ್ರೀನಿಧಿ, ದೇವರಾಜ್, ದೀಪು, ಮುಬೀನಾ, ಮೈಲಾರಿ ಇದ್ದರು.
Published on

ಬೆಟ್ಟದಪುರ: ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಅವರ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ್ ತಿಳಿಸಿದರು.

ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ಮಾತನಾಡಿದರು. ಮಕ್ಕಳ ಮೂಲ ಹಕ್ಕುಗಳಿಗೆ ಯಾವುದೇ ಹಂತದಲ್ಲೂ ಧಕ್ಕೆಯಾಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಪಿಡಿಒ ಮಂಜುನಾಥ್ ಮಾತನಾಡಿ, ಒಂದು ಶಾಲೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಹೊಂದಿರಬೇಕು. ಆ ಸೌಕರ್ಯಗಳು ಮಕ್ಕಳ ಶೈಕ್ಷಣಿಕ ಪ್ರಗತಿ, ಆರೋಗ್ಯ ಮತ್ತು ಸುರಕ್ಷತೆಯನ್ನು ಸಮತೋಲನಗೊಳಿಸಲು ಸಾಧ್ಯ. ಅಲ್ಲದೆ ಶಾಲಾ ಆವರಣದ ಸುತ್ತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಸ್ಯೆಗಳಿದ್ದರೆ ಗಮನಕ್ಕೆ ತರುವಂತೆ ಹೇಳಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ, ಸಿಬ್ಬಂದಿ ಪಾಂಡು, ಶ್ರೀನಿಧಿ, ದೇವರಾಜ್, ದೀಪು, ಮುಬೀನಾ, ಮೈಲಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net