

ಹೊನ್ನಾವರ: ಪಟ್ಟಣದ ಪೊಲೀಸ್ ಠಾಣೆಯ ಎದುರಿಗೆ ಹೆದ್ದಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಗೂಳಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಯಾವುದೇ ಪರವಾನಗಿ ಇಲ್ಲದೆ ಆಂಧ್ರಪ್ರದೇಶ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದ ಲಾರಿಯಲ್ಲಿ 9 ಗೂಳಿಗಳನ್ನು ಅಕ್ರಮವಾಗಿ ಆಂಧ್ರಪ್ರದೇಶದಿಂದ ಭಟ್ಕಳಕ್ಕೆ ಸಾಗಿಸಲಾಗುತ್ತಿತ್ತು. ಹೊನ್ನಾವರ ಪೊಲೀಸರು ಕಾರ್ಯಾಚರಣೆ ನಡೆಸಿ ಆಂಧ್ರದ ಕರ್ನೂಲ್ ಜಿಲ್ಲೆಯ ಅನುಮುಲಾ ಮುದ್ದಿಲೇಟಿ ರೆಡ್ಡಿ, ಅನುಮುಲಾ ಮಲ್ಲಿಕಾರ್ಜುನ ರೆಡ್ಡಿ ಎಂಬುವರನ್ನು ಬಂಧಿಸಿದ್ದಾರೆ. ಹೊನ್ನಾವರ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.