

ಮಾಗಡಿ: ಸನಾತನ ಹಿಂದು ಧರ್ಮ ರಸಿ, ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಭದ್ರ ಬುನಾದಿ ಹಾಕಿಕೊಡಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ತಾಲೂಕಿನ ಜಡೇದೇವರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತೃತೀಯ ವರ್ಷದ ಆಷಾಢ ಏಕದಶಾ ಮಹಾರುದ್ರಾಭಿಷೇಕ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸನಾತನ ಧರ್ಮದಲ್ಲಿ ಭಕ್ತಿ ಭಾವನೆಗಳನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕಿದೆ. ನಾವು ಧರ್ಮ ರಕ್ಷಣೆ ಮಾಡಿದರೆ ಧರ್ಮ ನಮ್ಮನ್ನು ರಸುತ್ತದೆ. ಎಷ್ಟೇ ವೈಜ್ಞಾನಿಕತೆ ಬೆಳೆದರೂ ಧಾರ್ಮಿಕ ಕಾರ್ಯಕ್ರಮಗಳಿಗೆ ಅದರದ್ದೇ ಆದ ಮಹತ್ವವಿದೆ. ಪೂರ್ವಿಕರು ಆಚರಿಸಿಕೊಂಡು ಬಂದಿರುವ ಧಾರ್ಮಿಕ ಕಾರ್ಯಕ್ರಮ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ನಮ್ಮ ತಂದೆ& ತಾಯಿಯನ್ನು ಗೌರವದಿಂದ ನೋಡಿಕೊಳ್ಳಬೇಕು. ಅಂತೆಯೇ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಅವರಿಗೆ ಮಠಗಳು ಹಿಂದಿನಿಂದ ಪ್ರೋತ್ಸಾಹ ನೀಡುತ್ತಿವೆ ಎಂದರು.
ಜಡೇದೇವರ ಮಠ ಪುರಸಭೆ ವ್ಯಾಪ್ತಿಗೆ: ಜಡೇದೇವರ ಮಠ ಪುರಸಭೆ ಅಥವಾ ಗ್ರಾಪಂ ವ್ಯಾಪ್ತಿಗೆ ಸೇರಿದೆಯಾ ಎಂಬುದನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ಪುರಸಭೆಗೆ ಸೇರಿಸಲು ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು. ಆ ಮೂಲಕ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಏಕದಳ ಬಿಲ್ವ ಬಂಡೇಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆಗಳು ಸಕಲರ ಬಾಳ ಬದುಕಿನಲ್ಲಿ ಆಶಾಕಿರಣವಾಗಿವೆ. ಧರ್ಮ ಪಾಲನೆಯಿಂದ ಜೀವನ ಉಜ್ವಲಗೊಳ್ಳಲಿದೆ. ಸ್ವಾರ್ಥ ರಹಿತವಾದ ಬದುಕಿಗೆ ಬೆಲೆ, ನೆಲೆಯಿದೆ. ಅದರಲ್ಲಿ ಅಂತಹ ಅದ್ಭುತ ಶಕ್ತಿಯಿದೆ. ಜೀವನದಲ್ಲಿ ಉತ್ಸಾಹ ಇದ್ದರೆ ಸಾಧನೆ ಸಿದ್ಧಿಯಾಗುತ್ತದೆ. ಜನ ಮೆಚ್ಚುವಂತಹ ಕೆಲಸ ದೊಡ್ಡದಾದರೆ ದೈವ ಮೆಚ್ಚುವಂತಹ ಕೆಲಸ ಅದಕ್ಕಿಂತಲೂ ದೊಡ್ಡದು. ಮನುಷ್ಯನ ಜೀವನದಲ್ಲಿ ರ್ನಿದಿಷ್ಟ ಗುರಿಯಿರಬೇಕು. ಆ ಗುರಿ ಸಾಧನೆಗಾಗಿ ನಿರಂತರ ಪ್ರಯತ್ನ ಅಗತ್ಯ ಎಂದರು.
ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು, ಪುರಸಭೆ ಸದಸ್ಯರಾದ ಶಿವರುದ್ರಮ್ಮವಿಜಯಕುಮಾರ್, ಭಾಗ್ಯಮ್ಮ, ಆನಂದಪ್ಪ, ಪ್ರಕಾಶಪ್ಪ, ಬಿಜೆಪಿ ಮುಖಂಡರಾದ ಪ್ರಸಾದ್ ಗೌಡ, ಜಗನಾಥ್ ಗೌಡ, ಎಂ.ಆರ್.ರಾವೇಂದ್ರ, ಕೆಂಚನಹಳ್ಳಿ ಕಿರಣ್ ಇತರರು ಇದ್ದರು.