ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ

4 skpp1
Published on

ಸಕಲೇಶಪುರ: ವಕೀಲರ ಮೇಲೆ ಹಲ್ಲೆ ನಡೆಸಿದ ಚಿಕ್ಕಮಗಳೂರು ಪೋಲಿಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ವಕೀಲರ ಸಂಘದವತಿಯಿಂದ ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 16 ವಕೀಲರ ವಿರುದ್ಧ ದೂರು ದಾಖಲಿಸಿರುವ ಪೊಲೀಸರು, ಸಮವಸ್ತ್ರ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಪ್ರತಿಭಟನೆ ನಡೆಸಿದ ಪೋಲಿಸರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಇತ್ತೀಚಿನ ವರ್ಷಗಳಲ್ಲಿ ವಕೀಲರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಆದ್ದರಿಂದ, ವಕೀಲರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ವಕೀಲರ ಹಿತರಕ್ಷಣಾ ಕಾಯಿದೆ ಜಾರಿಗೊಳಿಸ ಬೇಕು ಎಂದು ಆಗ್ರಹಿಸಲಾಯಿತು. ನಂತರ ಉಪವಿಭಾಗಾಧಿಕಾರಿ ಶೃತಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೂ ಮುನ್ನ ನ್ಯಾಯಾಲಯದಿಂದ ಉಪ ವಿಭಾಗಾಧಿಕಾರಿ ಕಚೇರಿವರಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು. ಹಿರಿಯ ವಕೀಲರಾದ ಪಿತಾಂಬರಾಚಾರ್, ಕೃಷ್ಣಮೂರ್ತಿ, ಶಿವಕುಮಾರ್, ಜ್ಯೋತಿ, ತಾರಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net