ಹಿಂದುಗಳ ಭಾವನೆಗೆ ಧಕ್ಕೆ ತರಬೇಡಿ : ಪುನೀತ್ ಅತ್ತಾವರ ಹೇಳಿಕೆ

New Project (17)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಜಿಲ್ಲೆಯಲ್ಲಿ ನೂರಾರು ಅಕ್ರಮ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದರೂ ಪೊಲೀಸ್ ಇಲಾಖೆ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹಿಂದುಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ವಿದ್ಯಮಾನಗಳನ್ನು ಎಂದಿಗೂ ಸಹಿಸುವುದಿಲ್ಲ ಎಂದು ಭಜರಂಗದಳ ವಿಹಿಂಪ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ ಹೇಳಿದರು.

ತಾಲೂಕಿನ ಚಾರ್ಮಾಡಿ ಬಳಿ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.

ವಿಹಿಂಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಚಾರ್ಮಾಡಿ ಪ್ರಕರಣದಲ್ಲಿ 5ಕ್ಕಿಂತ ಅಧಿಕ ಮಂದಿ ಭಾಗಿಯಾಗಿ ಇಬ್ಬರನ್ನು ಮಾತ್ರ ಪೊಲೀಸ್ ಇಲಾಖೆ ಬಂಧಿಸಿದೆ. ಉಳಿದವರನ್ನು ತಕ್ಷಣ ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪೊಲೀಸ್ ಇಲಾಖೆಯನ್ನು ಕೈಕಟ್ಟಿ ಕುಳಿತಿರುವಂತೆ ಮಾಡಲಾಗಿದೆ ಎಂದರು.

ವಿಹಿಂಪ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು. ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

ಹಿಂದು ಸಮಾಜದ ಭಾವನೆಗಳನ್ನು ಅರ್ಥ ಮಾಡಿಕೊಂಡು ಗೋಹತ್ಯೆ ನಿಷೇಧ ಕಾಯಿದೆಯಲ್ಲಿರುವ ಕಾನೂನುಗಳನ್ನು ಜಾರಿಗೆ ತರಬೇಕು. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಭಯೋತ್ಪಾದನೆ, ಗೋ ಹತ್ಯೆ ಮೂಲಕ ಹಿಂದು ಸಮಾಜದ ಭಾವನೆಗಳಿಗೆ ಘಾಸಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಬೀಳಬೇಕು. ಯೋಗಿ ಸರ್ಕಾರ ಬುಲ್ಡೋಜರ್ ಮಾದರಿ ಕಾರ್ಯಾಚರಣೆ ಕೈಗೊಂಡಿರುವ ಕಾರಣ ಉತ್ತರ ಪ್ರದೇಶದಲ್ಲಿ ಅನೇಕ ಕೃತ್ಯಗಳು ಹತೋಟಿಗೆ ಬಂದಿವೆ. ವಿಧಾನಸಭೆ ಸ್ಪೀಕರ್ ಗೋವುಗಳಿಗೂ ಬದುಕು ಹಕ್ಕಿದೆ ಎಂಬುದನ್ನು ಅರಿಯುವ ಅಗತ್ಯವಿದೆ. ಹರೀಶ್ ಪೂಂಜ, ಶಾಸಕ ಬೆಳ್ತಂಗಡಿ https://www.vijayavani.net/pressmeet-35 https://www.vijayavani.net/four-fishermen-rescued

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net