ಕುಂಬಳೆ ಕೆಎಸ್‌ಇಬಿ ಕಚೇರಿಯಲ್ಲಿ ಪ್ರತಿಭಟನೆ : ನಿರಂತರ ಪವರ್‌ಕಟ್ ಹಿನ್ನೆಲೆ

5
Published on

ಕುಂಬಳೆ: ಸಂಜೆ ಬಳಿಕ ನಿರಂತರ ವಿದ್ಯುತ್ ಸ್ಥಗಿತಗೊಳ್ಳುತ್ತಿರುವುದರಿಂದ ಸಮಸ್ಯೆಗೀಡಾದ ನಾಗರಿಕರು ಸೋಮವಾರ ರಾತ್ರಿ ಕುಂಬಳೆ ಕೆಎಸ್‌ಇಬಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ರಾತ್ರಿ 10 ಗಂಟೆಗೆ ಕೆಎಸ್‌ಇಬಿ ಕಚೇರಿಗೆ ತಲುಪಿದ ನಾಗರಿಕರು, ಮೇಣದ ಬತ್ತಿ ಉರಿಸಿ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ನಾಗರಿಕರು ಎಚ್ಚರಿಸಿದರು. ಕೆಲವು ದಿನಗಳಿಂದ ಕುಂಬಳೆ ಭಾಗದಲ್ಲಿ ಸಂಜೆ 5ರವರೆಗೆ ಪದೇಪದೆ ವಿದ್ಯುತ್ ಕಡಿತವಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ರಮಜಾನ್ ಸಂದರ್ಭ ಈ ರೀತಿಯಲ್ಲಿ ವಿದ್ಯುತ್ ನಿಲುಗಡೆ ಮಾಡುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಗಿ ಬರುತ್ತಿದೆ. ಶಾಸಕರಾದ ಎನ್.ಎ.ನೆಲ್ಲಿಕುನ್ನು ಹಾಗೂ ಎ.ಕೆ.ಎಂ.ಅಶ್ರಫ್ ಸೋಮವಾರ ರಾಜ್ಯ ವಿದ್ಯುತ್ ಸಚಿವ ಕೃಷ್ಣನ್ ಕುಟ್ಟಿ ಅವರನ್ನು ಭೇಟಿಯಾಗಿ ಜಿಲ್ಲೆಯ ಎರಡೂ ತಾಲೂಕುಗಳ ವಿದ್ಯುತ್ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಲು ಮನವಿ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net