ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

protest
Published on

ಮಡಿಕೇರಿ:

ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆ ಮತ್ತು ಮುಸ್ಲಿಂರಿಗೆ ಶೇ.4ರ ಮೀಸಲಾತಿ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಬೆಳಗ್ಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೇರಿದ ಪಕ್ಷದ ಎಲ್ಲಾ ನಾಯಕರು, ಮಂಡಲ ಅಧ್ಯಕ್ಷರು,ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ನಂತರ ಜ. ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ರಾಜ್ಯ ಸರ್ಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ನಂತರ ಡಿ.ಕೆ. ಶಿವಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ತಳೂರು ಕಿಶೋರ್ ಕುಮಾರ್, ಅರುಣ್‌ಕುಮಾರ್, ಮಹೇಶ್ ಜೈನಿ, ಅರುಣ್ ಶೆಟ್ಟಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net