ಅಸ್ಮಿತೆಗೆ ಧಕ್ಕೆ ಬಂದಾಗ ಒಗ್ಗಟ್ಟು ಅವಶ್ಯ: ನವೀನ್ ನೆರಿಯ ಅಭಿಪ್ರಾಯ

20
Published on

ಕಡಬ: ನಮ್ಮ ದೇಶದ ಅಸ್ಮಿತೆಗೆ ಧಕ್ಕೆ ಬಂದಾಗ ನಾವೆಲ್ಲರೂ ಜಾತಿ, ಧರ್ಮವನ್ನು ಬದಿಗಿಟ್ಟು ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹೇಳಿದರು.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಗುರುವಾರ ಆಲಂಕಾರು ಪೇಟೆಯಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಆಲಂಕಾರು ಪೇಟೆಯ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಹಿಂಜಾವೇ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಮಾತನಾಡಿದರು. ಆಲಂಕಾರು ದುಗಾರ್ಂಬಾ ವಿದ್ಯಾವರ್ಧಕ ಸಂ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೇಮಂತ್ ರೈ ಮನವಳಿಕೆ, ತಾಪಂ ಮಾಜಿ ಸದಸ್ಯ ದಯಾನಂದ ಆಲಡ್ಕ, ಆಲಂಕಾರು ಗ್ರಾಪಂ ಅಧ್ಯಕ್ಷೆ ಸುಶೀಲಾ ಕೊಂಡಾಡಿ, ಉಪಾಧ್ಯಕ್ಷ ರವಿ ಕುಂಞಲಡ್ಡ, ಪೆರಾಬೆ ಗ್ರಾಪಂ ಮಾಜಿ ಅಧ್ಯಕ್ಷ ಮೋಹನದಾಸ ರೈ ಪರಾರಿ ಮೊದಲಾದವದ್ದರು. ಹಿಂಜಾವೇ ಪ್ರಮುಖರಾದ ರವೀಂದ್ರದಾಸ ಸ್ವಾಗತಿಸಿದರು. ಜನಾರ್ದನಾ ಕಯ್ಯಾಪೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net