

ಉಳ್ಳಾಲ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರ ಮಹಿಳಾಮೋರ್ಚಾ ವತಿಯಿಂದ ಗುರುವಾರ ರಾತ್ರಿ ತೊಕ್ಕೊಟ್ಟು ಫ್ಲೈಓವರ್ ಕೆಳಗಡೆ ಮೊಂಬತ್ತಿ ಪ್ರತಿಭಟನೆ ನಡೆಯಿತು.
ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲು ಮಾತನಾಡಿ, ಜಿಹಾದಿ ಮನಸ್ಥಿತಿಯ ಉಗ್ರರು ಪ್ರವಾಸಿಗರ ಧರ್ಮ ಕೇಳಿ, ದಾಖಲೆ ಪರಿಶೀಲಿಸಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದು ಅಮಾನವೀಯ. ಪ್ರತಿಯೋರ್ವ ಭಾರತೀಯನೂ ಈ ಪೈಶಾಚಿಕ ಕೃತ್ಯ ಖಂಡಿಸಬೇಕು ಎಂದರು.
ಬಿಜೆಪಿ ಮಂಗಳೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಮೈಸೂರು ಇಲೆಕ್ಟ್ರಿಕಲ್ಸ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಹಿರಿಯ ಮುಖಂಡರಾದ ಲಲಿತಾ ಸುಂದರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಮಂಡಲ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಹೇಮಂತ್ ಶೆಟ್ಟಿ ದೇರಳಕಟ್ಟೆ, ಮಂಡಲ ಕಾರ್ಯದರ್ಶಿ ಸುಮನಾ ಹರೀಶ್ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ಕೋಟೆಕಾರು ಪಪಂ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ, ಸೋಮೇಶ್ವರ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಪರ್ಯತ್ತೂರು, ಸೋಮೇಶ್ವರ ಪುರಸಭಾ ಸದಸ್ಯರಾದ ಸ್ವಪ್ನ ಶೆಟ್ಟಿ, ಹರೀಶ್ ಕುಂಪಲ, ಬಿಜೆಪಿ ರೈತ ಮೋರ್ಚಾದ ಪದ್ಮನಾಭ ಗಟ್ಟಿ, ಭಗವಾನ್ ದಾಸ್ ತೊಕ್ಕೊಟ್ಟು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು ಸ್ವಾಗತಿಸಿದರು. ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ವಂದಿಸಿದರು.