ಪೌರ ಸೇವಾ ನೌಕರರ ಸಂಘದಿ0ದ ಮುಷ್ಕರ

protest
Published on

ಕುಶಾಲನಗರ:

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪ್ರತ್ಯೇಕ ಆದೇಶವಿಲ್ಲದೆ ಪೌರ ಸೇವಾ ನೌಕರರಿಗೂ ವಿಸ್ತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಸೇವಾ ನೌಕರರ ಸಂಘದಿAದ ಕುಶಾಲನಗರದಲ್ಲೂ ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದೆ.

ಈ ಸಂದರ್ಭ ಮಾತನಾಡಿದ ಪೌರ ಸೇವಾ ನೌಕರರ ಸಂಘದ ಕುಶಾಲನಗರ ಘಟಕದ ಅಧ್ಯಕ್ಷ ಎಸ್.ಆರ್. ಗಣೇಶ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಹಲವಾರು ಬೇಡಿಕೆಗಳು ಸುಮಾರು ದಶಕಗಳಿಂದ ಬಾಕಿ ಉಳಿದಿದ್ದು, ಈ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಈ ಕುರಿತಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ.

ಏ. 12ರಂದು ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸಂಘದ ರಾಜ್ಯದ ಪರಿಷತ್ ಸಭೆಯಲ್ಲಿ ಪೌರಸೇವಾ ನೌಕರರಗಳ ಬೇಡಿಕೆಗಳ ಬಗ್ಗೆ ಒಂದು ತಿಂಗಳ ಮುಷ್ಕರ ನೋಟಿಸ್‌ನ್ನು ಸರ್ಕಾರಕ್ಕೆ ಸಲ್ಲಿಸಲು ಮತ್ತು ಈ ಅವಧಿಯೊಳಗೆ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಣಯಿಸಲಾಗಿತ್ತು. ನೋಟಿಸ್ ಕೊಟ್ಟು ಒಂದು ತಿಂಗಳ ಅವಧಿ ಮುಗಿದಿದೆ. ರುತ್ತದೆ. ಆದರೆ ಈವರೆಗೆ ಸಂಘದ ಪದಾಧಿಕಾರಿಗಳ ಸಭೆ ಕರೆಯದೇ ಬೇಡಿಕೆಗಳನ್ನು ಈಡೇರಿಸದೇ ಇರುವುದರಿಂದ ಸೋಮವಾರದಿಂದ ರಾಜ್ಯಾದ್ಯಂತ ಸ್ವಚ್ಛತೆ ಮತ್ತು ಕಚೇರಿ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ. ಜೂ. 5ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಪೌರ ಸೇವಾ ನೌಕರರ ಸಂಘದ ಕುಶಾಲನಗರ ಘಟಕದ ಕಾರ್ಯದರ್ಶಿ ನಂಜುAಡ, ಉಪಾಧ್ಯಕ್ಷೆ ರಶ್ಮಿ, ಪದಾಧಿಕಾರಿಗಳು ಹಾಗೂ ನೌಕರರು ಇದ್ದರು.

ಮುಷ್ಕರ ನಿರತರ ಬೇಡಿಕೆಗಳು:

- ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು.

- ರಾಜ್ಯದ ನಗರ ಸ್ಥಳೀಯ ಸಂಸ್ಥೆಯ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಾತಿಗೊಳಿಸಬೇಕು.

- ನಗರ ಸಭೆಗಳಲ್ಲಿ ಶೇಕಡ 100ರÀಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ಅಡಿ ನೇಮಕಾತಿ ಮಾಡಬೇಕು.

- 2022ನೇ ಸಾಲಿನ ವಿಶೇಷ ನೇಮಕಾತಿ ಆಡಿ ಆಯ್ಕೆಯಾದ ಪೌರಕಾರ್ಮಿಕರು, ಲೋಡರ್ಸ್ಗಳಿಗೆ ಎಸ್.ಎಫ್.ಸಿ. ವೇತನ ನಿಧಿಯಿಂದ ವೇತನ ಪಾವತಿಸಬೇಕು.

- ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರಗಳನ್ನು ವಿಶೇಷ ನೇಮಕಾತಿ ಅಡಿ ಪರಿಗಣಿಸಬೇಕು.

- ಪೌರ ಸೇವಾ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು.

- ಐ.ಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕ, ಸ್ಯಾನಿಟರಿ ಸೂಪರ್ ವೈಸರ್ ಹಾಗೂ ಇತರ ವೃಂದದ ನೌಕರರನ್ನು ಪೌರ ಸೇವ ನೌಕರದೆಂದು ಪರಿಗಣಿಸಿ ವೀಲಿನಾತಿಗೊಳಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net