25ರಂದು ಪ್ರತಿಭಟನಾ ಜಾಥಾ

Protest Symbol
Published on

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ, ಹಿಂದು ಧಾರ್ಮಿಕ ಭಾವನೆಗಳಿಗೆ ಚ್ಯುತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಆ.25ರಂದು ಪಟ್ಟಣದಲ್ಲಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕು ಸಂಚಾಲಕ ಸೋಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಕಳಂಕ ತರುವ ನಿಟ್ಟಿನಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ಭಕ್ತರ ಮನಸ್ಸಿನಲ್ಲಿ ಆಕ್ರೋಶ, ಯುವ ಜನಾಂಗದಲ್ಲಿ ಕೋಮು ಭಾವನೆ ವ್ಯಕ್ತವಾಗುತ್ತಿದೆ. ಅಲ್ಲದೆ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ಆ.25ರ ಬೆಳಗ್ಗೆ 10.30ರಿಂದ ಜಾಥಾ ಹಾಗೂ ಜೇಸಿ ವೇದಿಕೆಯಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net