ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ

krv protest (4)
Published on

ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನ ನಡೆಸಿದ ಸಂದರ್ಭದಲ್ಲಿ ಬಂಧಿಸಲಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟಿಸಿದರು.

ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟಾ ರ‌್ಯಾಲಿ ನಡೆಸಿದ ಕರವೇ ಕಾರ್ಯಕರ್ತರು, ಬಂಧಿತರ ಬಿಡುಗಡೆಗೆ ಆಗ್ರಹಿಸಿ ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ರವಾನಿಸಿದರು.

ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ನಡೆದಿದ್ದ ಸಂಸದೀಯ ರಾಜ ಭಾಷಾ ಸಮಿತಿಯ ಹಿಂದಿ ಹೇರಿಕೆಯ ಸಮಾಲೊಚನಾ ಕಾರ್ಯರ್ಗಾರವ್ನನು ವಿರೋಧಿಸಿ ನಮ್ಮ ಕಾರ್ಯಕರ್ತರು ಪ್ರತಿಭಟಿಸಿದ್ದರು. ಹಿಂದಿ ಬ್ಯಾನರ್‌ಗಳನ್ನು ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಂಪೂರ್ಣವಾಗಿ ಪ್ರತಿಭಟನೆ ಶಾಂತಿಯುತವಾಗಿಯೇ ಆಗಿದೆ. ಆದರೂ ಕಾರ್ಯಕರ್ತರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಿಗೆ ಕಳುಹಿಸಿದ್ದಾರೆ. ಇದನ್ನು ಖಂಡನಾರ್ಹ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಿದೆ. ಇದನ್ನು ವಿರೋಧಿಸಿದ ಕರವೇ ಕಾರ್ಯಕರ್ತರಿಗೆ ಸಹಕಾರ ನೀಡಬೇಕಿದ್ದ ನಮ್ಮದೇ ರಾಜ್ಯ ಸರ್ಕಾರ ಬಂಧಿಸಿ ಜೈಲಿಗೆ ಹಾಕಿರುವುದು ಸರಿಯಲ್ಲ. ತಕ್ಷಣವೇ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವಣ್ಣವರ, ಗಣೇಶ ರೋಕಡೆ, ರಾಜು ನಾಶಿಪುಡಿ

ಹೊಳೆಪ್ಪಾ ಸುಳದಾಳ, ಅಡಿವೆಪ್ಪ ತಲ್ಲೂರಿ, ಬಸವರಾಜ ಅವರೊಳ್ಳಿ, ಪ್ರಕಾಶ ಲಮಾಣಿ, ಸತೀಶ್ ಗುಡದವರ, ವಿಠ್ಠಲ್ ಹಿಂಡಲ್ಕರ, ಲೋಕೇಶ ರಾಥೋಡ್. ರೇಖಾ ಲೋಕರಿ, ಶಾಂತಾ ಹಣಬರ, ತೇಜಸ್ವಿನಿ ಮಾನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net