ಮೆಸ್ಕಾಂ ವಿರುದ್ಧ ಪ್ರತಿಭಟನೆ

protest
Published on

ವಿಟ್ಲ: ಮೆಸ್ಕಾಂ ನೀತಿ ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿತು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು, ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ.ಭಟ್ ಮಾತನಾಡಿದರು.

ಪ್ರತಿಭಟನಾ ಸ್ಥಳದಲ್ಲಿ ರೈತರ ಜತೆ ಮೆಸ್ಕಾಂ ಪ್ರಭಾರ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಪೈ ಮಾತನಾಡಿದರು.

ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರು, ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಪುಚ್ಚತ್ತಡ್ಕ, ಗೌರವಾಧ್ಯಕ್ಷ ಹರ್ಷಕುಮಾರ್ ಹೆಗ್ಡೆ, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net