ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ- ಪ್ರತಿಭಟನೆ

2ss2dho ge manavi
Published on

ಶನಿವಾರಸಂತೆ : ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಲವು ವರ್ಷಗಳಿಂದ ತಜ್ಞ ವೈದ್ಯರು, ಕಾಯಂ ವೈದ್ಯರು ಸೇರಿದಂತೆ ಸಿಬ್ಬಂದಿ ಕೊರತೆ ಖಂಡಿಸಿ ಶನಿವಾರ ಆಸ್ಪತ್ರೆ ಎದುರು ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ವೈದ್ಯರ ನೇಮಕ ಮಾಡಿ ಎಂದು ಸಾರ್ವಜನಿಕರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಶಾಸಕ, ಸಂಸದರಿಗೆ ಮನವಿ ನೀಡಿದ್ದರೂ ಫಲಕಾರಿ ಆಗಿಲ್ಲ. ಆಸ್ಪತ್ರೆಗೆ ಕಾಯಂ ವೈದ್ಯರನ್ನೂ ನೇಮಕ ಮಾಡಿಲ್ಲ. ಇದರಿಂದ ಜನರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತುರ್ತು ಗಮನ ಹರಿಸಬೇಕು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್ ಕ್ರಮ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್ ಅವರು ಮುಖಂಡರಿಂದ ಮನವಿ ಸ್ವೀಕರಿಸಿದರು. ಜನವರಿ 21ರೊಳಗೆ ಆಸ್ಪತ್ರೆಗೆ ಕಾಯಂ ವೈದ್ಯರನ್ನು ನೇಮಿಸಲಾಗುವುದು ಎಂದು ಭರವಸೆ ನೀಡಿದರು. ಡಿಎಚ್‌ಒ ಆಶ್ವಾಸನೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡಲಾಯಿತು.
ದಸಂಸ ಜಿಲ್ಲಾ ಸಂಚಾಲಕ ಸಿ.ಸಿ.ಲೋಕೇಶ್. ಜಿಲ್ಲಾ ಸಂಚಾಲಕ ವಿಜಯ್ ಕುಮಾರ್, ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ವನಜಾಕ್ಷಿ, ಶನಿವಾರಸಂತೆ ಹೋಬಳಿ ಸಂಚಾಲಕ ರೋಹಿತ್‌ಕುಮಾರ್, ಮುಖಂಡರಾದ ಶಿವಕುಮಾರ್, ದಯಾಕರ್, ಮಧುಸೂದನ್, ರಂಗಸ್ವಾಮಿ ಮತ್ತು ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net