ಉದ್ದೂರು ಗ್ರಾಮಸ್ಥರ ಪ್ರತಿಭಟನೆ

MAR.. 12, HNP., PH.1. protest
Published on

ಹೊಳೆನರಸೀಪುರ : ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಉದ್ದೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಹೊಡೆದು, ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಸಹಬಾಳ್ವೆಯ ಜೀವನ ನಡೆಸುತ್ತಿರುವ ನಮ್ಮ ನಡುವೆ ಅಶಾಂತಿ ಉಂಟು ಮಾಡುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸುತ್ತೇವೆ. ಈ ಘಟನೆಗೆ ಕಾರಣವಾದ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿ ಪಡಿಸುವ ತನಕ ಭಾವಚಿತ್ರಕ್ಕೆ ಅಂಟಿರುವ ಸಗಣಿಯನ್ನು ತೊಳೆಯಲು ಬಿಡುವುದಿಲ್ಲವೆಂದು ಗ್ರಾಮಸ್ಥರು ಪಟ್ಟು ಹಿಡಿದರು. ವೃತ್ತ ನಿರೀಕ್ಷಕ ಸುರೇಶ ಕುಮಾರ್ ಅವರು ಗ್ರಾಮದ ಮುಖಂಡರುಗಳ ಜತೆ ಚರ್ಚೆ ನಡೆಸಿ, ಕಿಡಿಗೇಡಿಗಳನ್ನು ಪತ್ತೆ ಮಾಡಿ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿ, ಭಾವಚಿತ್ರ ಶುದ್ಧಗೊಳಿಸುವಲ್ಲಿ ಯಶಸ್ವಿಯಾದರು. ಹಳ್ಳಿಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಬಂಧಿಸುವ ತನಕ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಬಿಎಸ್‌ಪಿ ಜಿಲ್ಲಾಧ್ಯಕ್ಷ ಅತ್ನಿ ಹರೀಶ, ತಾಲೂಕು. ಅಧ್ಯಕ್ಷ ತಾರೇಶ, ಮುಖಂಡರಾದ ದೇವರಾಜು, ಯಶವಂತ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net