ಆರೋಗ್ಯ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಿ

28blrp1
Published on

ಬೇಲೂರು: ತಾಲೂಕಿನ ಮಲೆನಾಡು ಭಾಗಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೆಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಏಕಾಂಗಿ ಹೋರಾಟಗಾರ ತೀರ್ಥಪ್ಪ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಶುಕ್ರವಾರ ಪ್ರತಿಭಟಿಸಿದರು.
ನಂತರ ಮಾತನಾಡಿದ ಅವರು, ತಾಲೂಕಿನಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ರೋಗಿಗಳಿಗೆ ಬೇಕಾದ ಔಷಧ, ಮಾತ್ರೆಗಳು ಸರಿಯಾಗಿ ದೊರಕುತ್ತಿಲ್ಲ. ನಾಗೇನಹಳ್ಳಿ, ಕುಶಾವರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈ ಹಿಂದೆ ವಾರಕೊಮ್ಮೆಯಾದರೂ ವೈದ್ಯರು ಬರುತಿದ್ದರು. ಈಗ ಅವರೂ ಬರುತ್ತಿಲ್ಲ. ಈ ಬಗ್ಗೆ ವಿಚಾರಿಸಲು ಹೋದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ದೂರಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net