

ವಿಜಯವಾಣಿ ಬೆಂಗಳೂರು ಗ್ರಾಮಾಂತರ
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಹುಜನ ಸಮಾಜ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರತಿಭಟಿಸಿದರು.
ಮನುವಾದಿ ಮನಸ್ಥಿತಿಯುಳ್ಳ ಅಮಿತ್‌ಷಾ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವುದು ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಎನ್ನುವುದನ್ನು ಮರೆತು ಅಂಬೇಡ್ಕರ್ ಅವರಿಗೆ ಅಪಮಾನವಾಗುವಂತೆ ಮಾತನಾಡಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ನರಸಿಂಹಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಶೋಷಿತ ಸಮುದಾಯಕ್ಕೆ ಮಾಡಿರುವ ಅವಮಾನವನ್ನು ಖಂಡಿಸುತ್ತೇವೆ. ಅಮಿತ್ ಷಾ ಈ ಹೋರಾಟವನ್ನು ಕೇವಲವಾಗಿ ಪರಿಗಣಿಸಿದರೆ ಅಕ್ಕ ಮಾಯಾವತಿ ಅವರ ನಿರ್ದೇಶನದಂತೆ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಎಚ್ಚರಿಸಿದರು.