ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಪಟ್ಟು; ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್‌ಗೆ ಮನವಿ

17kolar3- apmc protest
Published on

ಕೋಲಾರ: ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮೀ ಅವರು ನಡೆಸಿರುವ ಭ್ರಷ್ಟಚಾರದ ವಿರುದ್ಧ ದೂರು ನೀಡಿದ್ದ ತನಿಖೆ ಕೈಗೊಂಡು ಕ್ರಮಜರುಗಿಸಲು ವಿಳಂಬ ತೋರುತ್ತಿರುವ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇವಾಭಿವದ್ಧಿ ಸಂದ ಪದಾಧಿಕಾರಿಗಳು ಎಪಿಎಂಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್‌ಗೆ ಮನವಿ ಸಲ್ಲಿಸಿದರು.


ಮಂಡಿ ಮಾಲೀಕ ಬಿಜಿಆರ್ ಸತೀಶ್ ಮಾತನಾಡಿ, ವಿಜಯಲಕ್ಷ್ಮೀ ವಿರುದ್ಧ ದೂರು ನೀಡಿ 50 ದಿನಗಳು ಕಳೆದಿವೆ. ಕಾಲಮಿತಿಯೊಳಗೆ ತನಿಖೆ ಕೈಗೊಂಡು ಕ್ರಮಜರುಗಿಸಲಾಗುವುದು ಎಂದು ರಾಜ್ಯ ಎಪಿಎಂಸಿ ಹೆಚ್ಚುವರಿ ಕಾರ್ಯದರ್ಶಿ ಕೋಲಾರಕ್ಕೆ ಭೇಟಿ ನೀಡಿದ್ದರು. ಆದರೂ ಯಾವುದೇ ರೀತಿ ಕ್ರಮ ಆಗಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.


ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮೀಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಇದ್ದು ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕು. ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.


ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಲಾಗಿದೆ. ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಮುಂದುವರಿಸಿರುವುದು ರೈತ ವಿರೋಧಿಯಾಗಿದೆ ಎಂದು ಕಿಡಿಕಾರಿದರು.

ಜೆಎನ್‌ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮೀ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲ ಮಂಡಿ ವಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವಹಿವಾಟನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net