ಅಧಿಕಾರಿಗೆ ನಿಂದಿಸಿದ ಶಾಸಕನ ವಿರುದ್ಧ ವೈದ್ಯರು, ಅರೋಗ್ಯ ಇಲಾಖೆ ನೌಕರರ ಪ್ರತಿಭಟನೆ

ಅರಅಸಿಕೆರೆ
Published on

ಹಾಸನ: ಕರೊನಾ ಸಮಯದಲ್ಲಿ ಕಷ್ಟಪಟ್ಟು ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಯ ಬಗ್ಗೆ ಅರಸಿಕೆರೆ ಶಾಸಕರು ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಅವರನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ವೈದ್ಯರು, ಆರೋಗ್ಯ ಇಲಾಖೆ ನೌಕರರು ಮಂಗಳವಾರದಂದು ಮೌನ ಪ್ರತಿಭಟನೆ ಮಾಡಿದ್ದಾರೆ.

ಶಾಸಕ ಶಿವಲಿಂಗೇಗೌಡರು ಮೇ 29ರಂದು ಸಿಎಂ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸುವಾಗ ಜಿಲ್ಲಾ ಅರೋಗ್ಯ ಅಧಿಕಾರಿಗೆ ನಿಂದಿಸಿದ್ದಾರೆ ಎನ್ನಲಾಗಿದೆ. ಕರೊನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಅರೋಗ್ಯ ಇಲಾಖೆ ಅಧಿಕಾರಿಗಳಿಗೆ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅವ್ಯಾಚ್ಯ ಶಬ್ದದಿಂದ ನಿಂದಿಸಿದ್ದಾರೆ ಎನ್ನುವ ಆರೋಪವಿದೆ.

ಆ ಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಶಾಸಕರು ಡಿಎಚ್ಓ ಅವರನ್ನು ನಿಂದಿಸಿದ್ದಾರೆ. ಹಾಗಾಗಿ ಅವರು ಕ್ಷಮೆ ಕೇಳಬೇಕೆಂದು ನೌಕರರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net