ಟಿ‌.ಎ.‌ ನಾರಾಯಣಗೌಡ ಬಂಧನ ಖಂಡಿಸಿ ಕರವೇ ಪ್ರತಿಭಟನೆ

prajavani_2023-12_70754811-0287-4413-86c2-a5ee36979647_WhatsApp_Image_2023_12_31_at_12_19_04_PM.jpeg
Published on

ಬೆಳಗಾವಿ: ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಲು ಆಗ್ರಹಿಸಿ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಹಾಗೂ ಕರವೇ ಪದಾಧಿಕಾರಿಗಳನ್ನು ಬಂಧಿಸಿರುವುದನ್ನು ಖಂಡಿಸಿ ನಗರದ ರಾಣಿ ಚನ್ನಮ್ಮನ ವೃತ್ತದಲ್ಲಿ ಕರವೇ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾನುವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಈ ಮಾರ್ಗದಲ್ಲಿ ಸಾಗುವ ಎಲ್ಲ ಬಸ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಪ್ರತಿಭಟನೆ ತಡೆಯಲು ಯತ್ನಿಸಿದ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net