

ಮೈಸೂರು: ಬಾಂಗ್ಲಾ ದೇಶದಲ್ಲಿ ನಡೆದ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ನರಗದಲ್ಲಿ ಸೋಮವಾರ ಎರಡು ಪ್ರತ್ಯೇಕ ಪ್ರತಿಭಟನೆ ನಡೆದವು.
ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ ನಗರ ಬಸ್ ನಿಲ್ದಾಣದ ಸಮೀಪ ಪ್ರತಿಭಟಿಸಲಾಯಿತು. ನಗರಪಾಲಿಕೆ ಕಚೇರಿ ಆವರಣದಿಂದ ಜಾಥಾ ಹೊರಟು ಸಿಟಿ ಬಸ್ ನಿಲ್ದಾಣದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ನಿರ್ಭಯದಿಂದ ಬದುಕುತ್ತಿದ್ದಾರೆ. ಆದರೆ, ಬಾಂಗ್ಲಾ ದೇಶದ ಅಲ್ಪಸಂಖ್ಯಾತರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಅವರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆ ರಾಷ್ಟ್ರದ ಹಿಂದುಗಳಿಗೆ ಮಾನವ ಹಕ್ಕು ಇಲ್ಲವೇ? 1947ರಲ್ಲಿ ಪಶ್ಚಿಮ ಪಾಕಿಸ್ತಾನದಲ್ಲಿ ಹಿಂದುಗಳ ಹತ್ಯಾಕಾಂಡ ನಡೆದಿತ್ತು. ಈಗ ಬಾಂಗ್ಲಾ ದೇಶದಲ್ಲಿ ಇದು ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬಾಂಗ್ಲಾದಲ್ಲಿ ನಿರಂತರವಾಗಿ ಹಿಂದುಗಳ ಮೇಲೆ ಹಲ್ಲೆ, ಹತ್ಯೆ ನಡೆಯುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಅಲ್ಲಿನ ಹಿಂದುಗಳ ರಕ್ಷಣೆಗೆ ನಿಲ್ಲಬೇಕು. ಕೇಂದ್ರ ಸರ್ಕಾರ ತಕ್ಷಣವೇ ಮುತುವರ್ಜಿ ವಹಿಸಬೇಕು ಎಂದು ಆಗ್ರಹಿಸಿದರು
ಕೆ.ಆರ್.ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋಪಾಲರಾಜೇ ಅರಸ್, ಪ್ರಧಾನ ಕಾರ್ಯದರ್ಶಿ ಜಯಶಂಕರ್, ಜಯರಾಮ್, ಉಪಾಧ್ಯಕ್ಷ ಎಂ.ಆರ್.ಬಾಲಕೃಷ್ಣ, ಮೈಸೂರು ನಗರ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಸೋಮಸುಂದರ್, ಮುಖಂಡರಾದ ಬಿಲ್ಲಯ್ಯ, ಚೇತನ್, ಚಂದ್ರಶೇಖರ್, ವಾದಿರಾಜ ಬಲ್ಲಾಳ್, ಹರೀಶ್, ರವಿ, ಕೀರ್ತಿ, ಕಿಶೋರ್ ಮತ್ತಿತರರು ಪಾಲ್ಗೊಂಡಿದ್ದರು.
ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ದಾಳಿ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯಿಂದ ಚಾಮುಂಡಿಪುರ ವೃತ್ತ, ವೇದಾಂತ ಹೆಮ್ಮಿಗೆ ವೃತ್ತ, ರಾಮಸ್ವಾಮಿ ವೃತ್ತ, ಗನ್‌ಹೌಸ್ ವೃತ್ತ, ನ್ಯಾಯಾಲಂುದ ಮುಂಭಾಗ ಸೇರಿದಂತೆ ನಗರದ ಪ್ರಮುಖ 30 ವೃತ್ತಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ಹಿಂದು ಹಿತರಕ್ಷಣಾ ಸಮಿತಿ ಸಂಚಾಲಕರಾದ ರಂಗಸ್ವಾಮಿ, ಮಹೇಶ್, ಗಿರೀಶ್, ಸಂತೋಷ್, ವಿಕ್ರಂ ಅಂ್ಯುಂಗಾರ್, ಚಂದ್ರುಕುವಾರ್, ಭೈರತಿ ಲಿಂಗರಾಜು, ಶ್ರೀನಿವಾಸ್, ಎಸ್.ಎನ್.ರಾಜೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.