ನಿಷೇಧ, ಅಪಪ್ರಚಾರ ಖಂಡಿಸಿ ಪ್ರತಿಭಟನೆ

protest mutalik
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶವನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶನಿವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶ್ರೀ ರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತೃತ್ವ ವಹಿಸಿದ್ದರು. ತಹಸೀಲ್ದಾರ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇಧವನ್ನು ತಕ್ಷಣ ವಾಪಸ್ ಪಡೆಯಬೇಕು. ಸ್ವಾಮೀಜಿಯವರ ಮಠಕ್ಕೆ ನೀಡಲಾದ ನೋಟಿಸ್ ರದ್ದು ಪಡಿಸಬೇಕು. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಸುಳ್ಳು ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಸರ್ಕಾರಿ ನೌಕರರಾದ ಪ್ರವೀಣಕುಮಾರ ಕೆ.ಪಿ. ಹಾಗೂ ಪ್ರಮೋದ್ ಕುಮಾರ ಅವರ ಅಮಾನತು ರದ್ದುಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸಂಯೋಜಕ ರಾಜು ಧರೆಯಣ್ಣವರ ಮಾತನಾಡಿ, ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರು ಸಮಾಜ ಸೇವೆಯ ಪ್ರತೀಕ. ಅವರ ಮೇಲೆ ಹೇರಿರುವ ನಿಷೇಧ ಧಾರ್ವಿುಕ ಸಹಿಷ್ಣುತೆಯ ಹನನ. ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಈ ವಿಷಯದಲ್ಲಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net