

ಕುಂದಾಪುರ: ಕೇಂದ್ರ ಸರ್ಕಾರದ ಬೆಲೆಯೇರಿಕೆ ನೀತಿಯಿಂದಾಗಿ ಜನರು ಈಗಾಗಲೇ ಬದುಕು ನಿರ್ವಹಿಸಲು ಕಷ್ಟ ಪಡುತ್ತಿದ್ದಾರೆ. ಇದರ ಮಧ್ಯೆ ರಾಜ್ಯ ಸರ್ಕಾರ ಬಡವರ ಜೀವನಾಡಿಯಾದ ಸರ್ಕಾರಿ ಬಸ್‌ಗಳ ಪ್ರಯಾಣ ದರ ಏರಿಕೆ ಮಾಡಿರುವುದು ಖಂಡನೀಯ ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಸೋಮವಾರ ವಂಡ್ಸೆಯಲ್ಲಿ ಸಿಪಿಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಶಂಕರ, ಭಾಸ್ಕರ್ ಶಾರ್ಕೆ, ಪ್ರಭಾಕರ ಗಾಣಿಗ, ನೇತ್ರಾವತಿ, ಗುಲಾಬಿ, ಗಿರಿಜಾ, ಮೂಕಾಂಬಿಕಾ, ಕೇಶವ ಮೊದಲಾದವರಿದ್ದರು.