ಸಿ.ಟಿ. ರವಿ ಹೇಳಿಕೆ ಖಂಡಿಸಿ ಪ್ರತಿಭಟನೆ

Published on

ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಂತೆ ಬಿಜೆಪಿ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆ ಖಂಡಿಸಿ ಡಿ. 20ರಂದು ಬೆಳಗ್ಗೆ 10.30ಕ್ಕೆ ಕೇಶ್ವಾಪುರದ ಸರ್ವೋದಯ ಸರ್ಕಲ್ ಬಳಿ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳ ಬಳಗ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ವಿಧಾನಮಂಡಲದ ಅಧಿವೇಶನದಲ್ಲಿ ಅಸಹ್ಯಕರ ಹೇಳಿಕೆ ನೀಡಿರುವುದು ಸಮಸ್ತ ನಾರಿ ಶಕ್ತಿಗೆ ಮಾಡಿರುವ ಅಪಮಾನವಾಗಿದೆ. ಮಹಿಳೆಯರ ಬಗ್ಗೆ ಕೆಟ್ಟ ಭಾಷೆ ಬಳಿಸಿರುವ ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಸುನೀಲ ಮಠಪತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net