ಬಳ್ಳಾರಿ; ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆ ಖಂಡಿಸಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಮಾತನಾಡಿ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಒಂದು ಕೋಮಿಗೆ ಮೀಸಲಾತಿ ನೀಡಲು ಸಂವಿಧಾನ ಬೇಕಾದರೂ ಬದಲಾಯಿಸುತ್ತೇವೆ ಎಂಬ ಹೇಳಿಕೆಯನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಧರ್ಮಾಧಾರಿತ ಮೀಸಲಾತಿಗೆ ನಾವು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವುದಕ್ಕೆ ಇವರು ಯಾರು ?. ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಈಗ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸಂವಿಧಾನದ ಬದಲಾವಣೆ ಮಾಡಿದರೇ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಬಳಿಕ ಕಾಂಗ್ರೆಸ್ ಪಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು.