

ಮಡಿಕೇರಿ: ಹಿಂದುಗಳ ಸಾಮೂಹಿಕ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣ ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಮಡಿಕೇರಿ ನಗರಸಭೆ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಕುಕ್ಕೇರ ಅಜಿತ್ ಮಾತನಾಡಿ, ಜಿಲ್ಲೆಯಲ್ಲಿ ಅಶಾಂತಿಯನ್ನು ಸೃಷ್ಠಿ ಮಾಡುವಂತಹ ಉದ್ದೇಶವನ್ನಿಟ್ಟುಕೊಂಡು ಇಸ್ಲಾಂಮಿಕ್ ಭಯೋತ್ಪಾದಕ ಸಂಘಟನೆಯ ಕಾರ್ಯಕರ್ತರು ಮಾಡುತ್ತಿದ್ದಾರೆ. ದುರೂದ್ದೇಶ ಸಂಚನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭ ಹಿಂದುಗಳ ಸಾಮೂಹಕ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಮುಸ್ತಫಾ ರವರ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯರವರ ಮೂಲಕ ಮನವಿಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬಿ.ವಿ.ಭಾರತೀಶ್, ನಗರ ಬಿಜೆಪಿ ಅಧ್ಯಕ್ಷ ಮನುಮಂಜುನಾಥ್, ನಗರಸಭೆ ಆಧ್ಯಕ್ಷೆ ಅನಿತಾ ಪೂವಯ್ಯ, ಮಹೇಶ್ ಜೈನಿ, ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ವಿನಯ್ ಕುಮಾರ್, ಪ್ರಮುಖರಾದ ಚೇತನ್, ಅಪ್ಪಣ್ಣ, ಸವಿತಾ ರಾಕೇಶ್, ಅರುಣ್ ಶೆಟ್ಟಿ, ಸುನಿಲ್ ಮಾದಾಪುರ ೬೦ ಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು.