ಸಿ.ಟಿ.ರವಿ ವಿರುದ್ಧ ಪ್ರತಿಭಟನೆ

8
Published on

ಮೈಸೂರು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.


ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ಸಿ.ಟಿ.ರವಿ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಸಿ.ಟಿ.ರವಿ ಅವಹೇಳನಕಾರಿ ಹೇಳಿಕೆ ಹಾಗೂ ವೈಯಕ್ತಿಕ ನಿಂದನೆ ಮಾಡಿದ್ದಾರೆ. ಸಿದ್ದರಾಮ್ಮಯ್ಯ ಅವರನ್ನು ಅತ್ಯಂತ ಕೀಳು ಪದಗಳಲ್ಲಿ ನಿಂದಿಸಿರುವುದು ಸರಿಯಲ್ಲ. ಈ ಕೂಡಲೇ ಅವರು ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ವಿಜಯ್‌ಕುಮಾರ್, ಸಂಘದ ಅಧ್ಯಕ್ಷ ಹಿನಕಲ್ ಪ್ರಕಾಶ್, ವಕೀಲ ಚರಣ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net