ಮುತಾಲಿಕ್ ವಿರುದ್ಧ ದೂರು ದಾಖಲಿಸಿದ್ದಕ್ಕೆ ಪ್ರತಿಭಟನೆ

muta
ಮುತಾಲಿಕ್ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲಿಸಿರುವುದನ್ನು ಖಂಡಿಸಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖಂಡರಾದ ರಂಜಿತ್ ಶೆಟ್ಟಿ, ರಾಜೇಂದ್ರ ಶರ್ಮಾ, ಶರತ್, ನವೀನಾ, ನಂದನ್ ಇತರರಿದ್ದರು.
Published on

ಚಿಕ್ಕಮಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಹುಬ್ಬಳ್ಳಿಯಲ್ಲಿ ಉದ್ದೇಶಪೂರ್ವಕವಾಗಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಸಂಘಟನೆ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ ಈದ್ಗಾ ಮೈದಾನದ ವಿಚಾರದಲ್ಲಿ ಉದ್ರೇಕಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ದೂರು ದಾಖಲು ಮಾಡಲಾಗಿದೆ. ಶ್ರೀರಾಮ ಸೇನೆ ಹಾಗೂ ಪ್ರಮೋದ್ ಮುತಾಲಿಕ್ ಅವರಿಗೆ ಕೇಸ್‌ಗಳು ಹೊಸದಲ್ಲ. ಸಂಘಟನೆ ವಿರುದ್ಧ ಇದುವರೆಗೆ 111 ಮೊಕದ್ದಮೆಗಳು ದಾಖಲಾಗಿವೆ. ಇದು 112ನೇ ಕೇಸ್. ದೂರು ದಾಖಲಿಸುವ ಮೂಲಕ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಛತ್ರಪತಿ ಶಿವಾಜಿ ಮಹಾರಾಜರ ಆದರ್ಶದ ಮೇಲೆ ಸಂಘಟನೆ ಕೆಲಸ ಮಾಡುತ್ತಿದೆ. ನಮ್ಮ ಕೆಲಸ ಮುಂದುವರಿಸುತ್ತೇವೆ. ಹಿಂದು ಸಮಾಜ ರಾಜ್ಯ ಸರ್ಕಾರದ ವಿರುದ್ಧ ಎದ್ದು ನಿಂತಿದೆ ಎಂದು ಎಚ್ಚರಿಕೆ ನೀಡಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದು ಮುಖಂಡರ ವಿರುದ್ಧ ಸುಳ್ಳು ಆರೋಪ ಹೊರಿಸಿ ಕೇಸ್ ದಾಖಲಿಸಲಾಗುತ್ತಿದೆ. ಈ ಮೂಲಕ ಹಿಂದು ನಾಯಕರನ್ನು ಮಟ್ಟ ಹಾಕುವ ಕೆಲಸ ಮಾಡುತ್ತಿರುವುದನ್ನು ಹಿಂದು ಸಮಾಜ ಗಮನಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಕಾಂಗ್ರೆಸ್‌ಗೆ ಹಿಂದು ಸಮಾಜ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.ಶ್ರೀರಾಮ ಸೇನೆ ವಿಭಾಗ ಅಧ್ಯಕ್ಷ ರಂಜಿತ್ ಶೆಟ್ಟಿ, ಮಾರ್ಗದರ್ಶಕ ರಾಜೇಂದ್ರ ಶರ್ಮಾ, ಜಿಲ್ಲಾಧ್ಯಕ್ಷ ಜ್ಞಾನೇಂದ್ರ ಜೈನ್, ಸಂಘಟನಾ ಕಾರ್ಯದರ್ಶಿ ಶರತ್, ದುರ್ಗಾ ಸೇನೆ ಜಿಲ್ಲಾಧ್ಯಕ್ಷೆ ನವೀನಾ, ಪ್ರಮುಖರಾದ ಯಶವಂತ್, ನಂದನ್, ಪ್ರಜ್ವಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net