ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

2 skp 2.docx
Published on

ಸಕಲೇಶಪುರ: ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಬಹುಜನ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗುರುವಾರ ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.

ಕಳೆದ 15 ದಿನಗಳಿಂದ ರೂಪಾಯಿ ಲೆಕ್ಕದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಇಂದು ಪೆಟ್ರೋಲ್ ಬೆಲೆ ಸಾರ್ವಕಾಲಿಕ ಏರಿಕೆಯನ್ನು ದಾಖಲಿಸಿದೆ. ಇದು ಅಭಿವೃದ್ಧಿಗೆ ಮಾರಕ ಆದ್ದರಿಂದ ಪೆಟ್ರೋಲ್ ಡೀಸೆಲ್ ಧಾರಣೆಯನ್ನು ಕೂಡಲೇ ತಗ್ಗಿಸಬೇಕು ಎಂಬ ಮನವಿಯನ್ನು ತಹಸೀಲ್ದಾರ್ ಮಂಜುನಾಥ್ ಅವರಿಗೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net