ಹೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ, ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

IMG-20240904-WA0053.jpg
Published on

ಹುಬ್ಬಳ್ಳಿ: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಕೈಬಿಡಬೇಕು, ವಿದ್ಯುತ್ ಅವಘಡದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ನವನಗರದ ಹೆಸ್ಕಾಂ ಕಚೇರಿ ಎದುರು ನೂರಾರು ರೈತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.

ಮನೆ ಬಳಕೆ ವಿದ್ಯುತ್ ದರ ಹೆಚ್ಚಳ ಮಾಡಬಾರದು. ಕೊಳವೆ ಬಾವಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಹೆಸ್ಕಾಂ ಅಧಿಕಾರಿಗಳಿಗೆ ನೀಡಲಾಯಿತು.

ಸಂಘದ ಅಧ್ಯಕ್ಷ ಈರಪ್ಪ ಕಂಕೊಳ್ಳಿ, ಸುಭಾಸ ಮಾದಣ್ಣವರ, ಕಲ್ಮೇಶ ಲಿಗಾಡಿ, ಉಳವಪ್ಪ ಪರಸಣ್ಣವರ, ಅಮೃತ ಕಮ್ಮಾರ, ಮಾರುತಿ ಸುಂಕದ, ಅಲ್ಲಾಭಕ್ಷ ಕುಂದುಬೈಯಣ್ಣವರ, ಕರಿಯಪ್ಪ ಅವರಾದಿ, ಮಹಾದೇವಿ ಪಾಟೀಲ, ಮಲ್ಲವ್ವ, ಸಿದ್ರಾಮಪ್ಪ ನಾಗರಳ್ಳಿ, ಬಸವರಾಜ ಗುಮ್ಮಗೋಳ, ಇತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net