ಎಸ್‌ಟಿಗೆ ಕುರುಬ ಸೇರ್ಪಡೆ ವಿರೋಧಿಸಿ ಪ್ರತಿಭಟನೆ

Published on

ಬಳ್ಳಾರಿ : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುತ್ತಿರುವುದು ವಿರೋಧಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ವಾಲ್ಮೀಕಿ ಸಮುದಾಯವು ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕವಾಗಿ ಹಿಂದೆ ಉಳಿದಿದೆ. ಇತ್ತೀಚಿಗೆ ಸಮಾಜದಲ್ಲಿ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಚೇತರಿಸಿಕೊಳ್ಳುತ್ತಿದೆ. ಸಮಾಜದ ಪ್ರಸನ್ನಾನಂದ ಸ್ವಾಮೀಜಿಗಳ ನಿರಂತರ ಹೋರಾಟದಿಂದ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆದರೆ, ಈವರೆಗೆ ಕಾರ್ಯರೂಪಕ್ಕೆ ತಂದಿಲ್ಲ. ಆದ್ದರಿಂದ, ಸಮುದಾಯವು ಈಗಲೂ ಕೇವಲ ಶೇ. 3ರಷ್ಟು ಮೀಸಲಾತಿಯಲ್ಲಿ ಮುಂದುವರೆಯುತ್ತಿದ್ದಾರೆ. ಇಂತಹ ನಡುವೆ ರಾಜ್ಯ ಸರ್ಕಾರ ಕುರುಬ ಸಮಾಜವನ್ನು ಎಸ್‌ಟಿ ಗೆ ಸೇರ್ಪಡೆ ಮಾಡಲು ಶಿಫಾರಸು ಮಾಡಲು ಹುನ್ನಾರ ನಡೆಸಿದೆ. ಹೀಗಾಗಿ ಕೇಂದ್ರಕ್ಕೆ ಶಿಫಾರಸು ಮಾಡುವ ಬಗ್ಗೆ ಕೈ ಬಿಡಬೇಕು. ಇಲ್ಲದಿದ್ದರೆ ವಾಲ್ಮೀಕಿ ಸಮುದಾಯವು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸಮುದಾಯದಿಂದ ಸರ್ಕಾರಕ್ಕೆ ಎಚ್ಚರಿಸಲಾಯಿತು. ಬಳಿಕ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net