

ವಿಜಯವಾಣಿ ಸುದ್ದಿಜಾಲ ಧಾರವಾಡ
ತಮಿಳು ನಟ ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕರ್ನಾಟಕ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.
ಕಮಲ್ ಹಾಸನ್ ಅವರು ತಮಿಳು ಭಾಷೆಯು ಕನ್ನಡ ಭಾಷೆಯ ಉಗಮಕ್ಕೆ ಕಾರಣವಾಗಿದ್ದು, ತಾಯಿ ಮಗುವಿನ ಸಂಬ0ಧ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ನಾಡಿನಾದ್ಯಂತ ಪ್ರತಿಭಟನೆ, ಖಂಡನೆ ವ್ಯಕ್ತವಾಗಿದೆ. ಕರ್ನಾಟಕ ಹೈಕೋರ್ಟ್ ಕನ್ನಡಿಗರ ಕ್ಷಮೆ ಕೇಳಲು ಸೂಚಿಸಿದರೂ ಕಮಲ್ ಹಾಸನ್, ಕ್ಷಮೆ ಕೇಳಿ ಆದ ಪ್ರಮಾದ ಸರಿಪಡಿಸುವುದನ್ನು ಬಿಟ್ಟು ಮೊಂಡು ವಾದ ಮಾಡುತ್ತಿದ್ದಾರೆ. ಅವರು ಕೂಡಲೇ ಕನ್ನಡಿಗರ ಕ್ಷಮೆ ಕೇಳುವ ಮೂಲಕ ತಮ್ಮ ಹೃದಯವಂತಿಕೆ ತೋರಬೇಕು ಎಂದು ಆಗ್ರಹಿಸಿದರು.
ಈ ಕುರಿತು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.
ಸಂಘದ ಅಧ್ಯಕ್ಷ ಚಂದ್ರಕಾ0ತ ಬೆಲ್ಲದ, ಶಂಕರ ಹಲಗತ್ತಿ, ಬಸವಪ್ರಭು ಹೊಸಕೇರಿ, ಡಾ. ಸಂಜೀವ ಕುಲಕರ್ಣಿ, ಡಾ. ರಾಜೇಶ್ವರಿ ಮಹೇಶ್ವರಯ್ಯ, ಡಿ.ಎಂ. ಹಿರೇಮಠ, ಡಾ. ರಾಮು ಮೂಲಗಿ, ಪಿ.ಎಚ್. ನೀರಲಕೇರಿ, ಡಾ. ವೀರಣ್ಣ ರಾಜೂರ, ಚಂದ್ರಶೇಖರ ರೊಟ್ಟಿಗವಾಡ, ವೀರಣ್ಣ ವಡ್ಡೀನ ಹಾಗೂ ಸದಸ್ಯರು, ಸಾಹಿತಿಗಳು, ಕಲಾವಿದರು, ಕನ್ನಡದ ವಿದ್ವಾಂಸರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.