ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

New Project (15)
Published on

ವಿಜಯವಾಣಿ ಸುದ್ದಿಜಾಲ ಕೊಕ್ಕಡ

ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವಿರುದ್ಧ ಪ್ರತಿಭಟನೆ ಗ್ರಾ.ಪಂ.ವಠಾರದಲ್ಲಿ ನಡೆಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಲಾಯಿತು.

ಸರ್ಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು.

ಶಿಶಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀನ್, ಶಿಶಿಲ ಪಂಚಾಯಿತಿ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಬಾಲಕೃಷ್ಣ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಶೀನಪ್ಪ ನಾಯ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net