ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

MDK13
Published on

ಮಡಿಕೇರಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.


ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾನಿರತರು ಕಸ್ತೂರಿ ರಂಗನ್ ವರದಿ ಜಾರಿಯಾದರೆ ಅದರಿಂದ ಜಿಲ್ಲೆಯ ಜನತೆಗೆ ಸಮಸ್ಯೆಯಾಗಲಿದೆ ಎಂದು ಅಸಮಾಧಾನ ಹೊರಹಾಕಿದರು.


ಈ ಸಂದರ್ಭ ಮಾತನಾಡಿದ ಭಾರತ ಕಮ್ಯೂನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಸದಸ್ಯ ಈ.ರಾ ದುರ್ಗಪ್ರಸಾದ್, ವರದಿ ಜಾರಿ ಬಗ್ಗೆ ತಳಮಟ್ಟದ ಪರಿಶೀಲನೆಯನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು. ಆದರೆ ಮೂರು ವರ್ಷದಿಂದ ಅಧಿಕಾರದಲ್ಲಿರುವ ಸರ್ಕಾರ ಈ ಕಾರ್ಯ ಏಕೆ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ನಿಯೋಗವೂ ಕೇಂದ್ರವನ್ನು ಭೇಟಿ ಮಾಡಿದ್ದಾಗಿ ಹೇಳುತ್ತಿದೆ. ಆದರೆ ಇದು ಚುನಾವಣೆಯನ್ನು ಮುಂದಿಟ್ಟುಕೊಂಡು ಸರ್ಕಾರ ಮಾಡುವ ನಾಟಕವಾಗಿದೆ ಎಂದು ಅಸಮಾಧಾನ ಹೊರಹಾಕಿದ ಅವರು, ಕಸ್ತೂರಿ ರಂಗನ್ ವರದಿ ಜಾರಿಯಾಗಬಾರದು. ಹಾಗೂ ಸರ್ಕಾರ ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಆಗ್ರಹಿಸಿದರು.


ಪ್ರತಿಭಟನಾ ನಿರತರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತ ಮೂಲಕ ಮನವಿ ಪತ್ರ ಸಲ್ಲಿಸಿದರು.


ಪ್ರತಿಭಟನೆಯಲ್ಲಿ ಸದಸ್ಯರಾದ ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ಎ.ಮಹದೇವ, ಸಾಜಿ ರಮೇಶ್, ಕಾರ್ಯದರ್ಶಿ ಎಚ್.ಬಿ.ರಮೇಶ್, ಪಿ.ಆರ್.ಭರತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net