ಮಹಾರಾಷ್ಟ್ರ ಸಿಎಂ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ

Protest against Maharashtra CM in Mysore
Published on

ಮೈಸೂರು: ಕರ್ನಾಟಕದ ಕೆಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಖಂಡಿಸಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಏಕನಾಥ್ ಶಿಂಧೆ ಒಕ್ಕೂಟ ವ್ಯವಸ್ಥೆಗೆ ಅಗೌರವ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುತ್ತಿದ್ದರೂ ಕೇಂದ್ರ ಸರ್ಕಾರ ಹಾಗೂ ನಮ್ಮ ರಾಜ್ಯದ ಸಂಸದರು ಮೌನ ವಹಿಸಿರುವುದು ಅತ್ಯಂತ ನೋವಿನ ಸಂಗತಿ. ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದು, ರಾಜ್ಯ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಡಾ. ಶಾಂತರಾಜೇ ಅರಸ್, ಎಂ.ಬಿ. ಪ್ರಭುಶಂಕರ್, ಸಿ.ಎಚ್. ಕೃಷ್ಣಯ್ಯ, ವಿಜಯೇಂದ್ರ, ಕುಮಾರ್ ಗೌಡ, ಎಸ್. ಚಂದ್ರು, ಎಳನೀರು ರಾಮಣ್ಣ, ದರ್ಶನ್ ಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net