ಎಸ್‌ಡಿಎಂಸಿ ಅಧ್ಯಕ್ಷನ ವಿರುದ್ಧ ಪ್ರತಿಭಟನೆ

5hos3p strike
ಹೊಸನಗರ ಶಾಸಕರ ಮಾದರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರ ವಿರುದ್ಧ ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸಿದರು. ಕೆ.ವಿ.ಸುಬ್ರಹ್ಮಣ್ಯ, ನಿತಿನ್, ಸುರೇಶ್ ಇತರರಿದ್ದರು.
Published on

ಹೊಸನಗರ: ಪಟ್ಟಣದ ಶಾಸಕರ ಮಾದರಿ ಹೆಣ್ಣುಮಕ್ಕಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಕೂಡಲೆ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಪ್ರಮುಖರು ಹಾಗೂ ಕೆಲ ಪಾಲಕರು ಸೋಮವಾರ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದರು.

ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಎಸ್‌ಡಿಎಂಸಿ ಸದಸ್ಯ ರಮೇಶ್ ನೇರ್ಲೆ ಎಂಬಾತನ ಮೇಲೆ ವಿನಾಕಾರಣ ಅಶ್ವಿನಿಕುಮಾರ್ ಹಲ್ಲೆ ನಡೆಸಿದ್ದಾರೆ. ಅಧ್ಯಕ್ಷರ ಈ ವರ್ತನೆ ಇದೇ ಮೊದಲಲ್ಲ. ಹಿಂದೆಯೂ ಹಲವು ಬಾರಿ ಇದೇ ರೀತಿ ವರ್ತಿಸಿದ್ದಾರೆ. ಆದರೆ ಅವರ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ರಶ್ಮಿ ಹಾಲೇಶ್, ಪ್ರತಿಭಟನಾಕಾರರ ಅಹವಾಲು ಆಲಿಸಿ ಮನವಿ ಸ್ವೀಕರಿಸಿದರು. ಬಿಇಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
ತಾಲೂಕು ಬಿಜೆಪಿ ಅಧ್ಯಕ್ಷ ಕೆ.ವಿ.ಸುಬ್ರಹ್ಮಣ್ಯ, ಯುವಮೋರ್ಚಾ ಅಧ್ಯಕ್ಷ ನಿತಿನ್ ನಗರ, ಜಿಪಂ ಮಾಜಿ ಸದಸ್ಯ ಸುರೇಶ್, ಪ್ರಮುಖರಾದ ಸ್ವಾಮಿರಾವ್, ವೀರೇಶ್ ಅಲವಳ್ಳಿ, ಎಂ.ಎನ್.ಸುಧಾಕರ್, ರಮೇಶ್ ನೇರ್ಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net