ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ: ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆಗೆ ಒತ್ತಾಯ

Protest against state government Mandya
Published on

ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಹಣವನ್ನು ಗ್ಯಾರಂಟಿ ಯೋಜನೆಗೆ ಸರ್ಕಾರ ಬಳಿಸಿಕೊಂಡಿರುವುದನ್ನು ವಾಪಸ್ ನೀಡುವಂತೆ ಆಗ್ರಹಿಸಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ)ಯಿಂದ ನಡೆಸುತ್ತಿರುವ ಜಾಥಾ ನಗರಕ್ಕೆ ಆಗಮಿಸಿತು.

ಮೈಸೂರಿನಿಂದ ಬೆಂಗಳೂರಿನ ವಿಧಾನಸೌಧಕ್ಕೆ ತೆರಳುತ್ತಿರುವ ಕಾಲ್ನಡಿಗೆ ಜಾಥಾ ಜಿಲ್ಲಾಧಿಕಾರಿ ಕಚೇರಿ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೆಂಗಳೂರಿನ ಕಡೆಗೆ ಹೆಜ್ಜೆ ಹಾಕಿದರು. ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣ ವಾಪಸ್ ಕೊಡಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಸಮಿತಿಯ ಆರ್.ಮೋಹನ್‌ರಾಜು, ರಾಜು ಎಂ.ತಳವಾರ್, ಶೇಖರ್ ಹಾವಂಚೆ, ಸ್ವಪ್ನಾ, ಕೆ.ಬಿ.ರಾಜು, ಎ.ಚಿದಾನಂದ, ಜೆ.ಸಿದ್ದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net