

ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ಅಂಗವಾಗಿ ಜೆಸಿಟಿಯು ಮತ್ತು ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ಕಾರ್ಮಿಕರ ಹಕ್ಕುಗಳನ್ನು ದಮನ ಮಾಡಲು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ ಬಂಡವಾಳ ಶಾಹಿಗಳ ಹಿತ ಕಾಪಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.
ಅಕ್ಷರ ದಾಸೋಹ ಹಾಗೂ ಎಲ್ಲಾ ಯೋಜನಾ ಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿದರು. ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ, ಎಐಸಿಸಿಟಿಯು ರಾಜ್ಯ ಗೌರವಾದ್ಯಕ್ಷ ಮೋಹನ್ ಕೆ.ಇ. ಸ್ವಾಗತಿಸಿದರು. ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಶಾಹುಲ್ ಹಮೀದ್, ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಜಯಶ್ರೀ, ಎಐಸಿಸಿಟಿಯು, ಐಪಿಸಿಎಲ್ ಟಕದ ಅಧ್ಯಕ್ಷ ಪ್ರದೀಪ್, ಅಖಿಲ ಭಾರತ ಕಿಸಾನ್ ಮಹಾಸಭಾ ಜಿಲ್ಲಾಧ್ಯಕ್ಷ ಮಹಾವೀರ್ ಜೈನ್ ಪುತ್ತೂರು, ಮುಖಂಡರಾದ ಸಂಜೀವ ಬೆಳ್ತಂಗಡಿ, ಸುಲೈಮಾನ್ ಕೆಲಿಂಜ, ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಕೊಲ, ಎಐಸಿಸಿಟಿಯು ಜಿಲ್ಲಾ ಮುಖಂಡರಾದ ಭರತ್ ಕುಮಾರ್, ವಿಶ್ವನಾಥ್, ಸಜೇಶ್ ವಿಟ್ಲ, ಲಿಯಕತ್ ಖಾನ್, ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಸುಧಾ ರಾವ್ ಬೆಳ್ತಂಗಡಿ ಮೊದಲಾದವರಿದ್ದರು.