ಶಿಶು ಹಾಗೂ ತಾಯಿ ಮರಣಗಳ ಸಂಖ್ಯೆ ಹೆಚ್ಚಳ ಖಂಡಿಸಿ ಪ್ರತಿಭಟನೆ

raichur
raichur
Published on

 ರಾಯಚೂರು ಜಿಲ್ಲೆಯಲ್ಲಿ ಶಿಶು ಹಾಗೂ ತಾಯಿ ಮರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ, ಸರ್ಕಾರ ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿರುವದನ್ನು ಖಂಡಿಸಿ ರಾಜ್ಯ ಮಹಿಳಾ ಒಕ್ಕೂಟ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ವತಿಯಿಂದ ನಗರದ ಟಿಪ್ಪುಸುಲ್ತಾನ ಉದ್ಯಾನವನದಲ್ಲಿ ಮಂಗಳವಾರ ಗರ್ಭಿಣಿ ಮಹಿಳೆ ಪ್ರತಿಕೃತಿ ಇಟ್ಟು ಅನಿರ್ಧಿಷ್ಟಾವಧಿ ಧರಣಿ ಮಾಡಿದರು.

ರಾಜ್ಯ ಮತ್ತು ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣಗಳ ಸಂಖ್ಯೆ ಪ್ರತಿ ತಿಂಗಳು ಹೆಚ್ಚುತ್ತಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿದರು. ಜಿಲ್ಲೆಯಲ್ಲಿ ನಿರಂತರವಾಗಿ ಶಿಶು ಮತ್ತು ತಾಯಿ ಮರಣಗಳ ಕುರಿತು ಹಾರಿಕೆ ಉತ್ತರ ನೀಡುತ್ತಿರುವ ವೈಧ್ಯರ ಹೇಳಿಕೆ ವಿರುದ್ಧ ಅಸಮಾಧಾನ ಹೊರಹಾಕಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಮಹಿಳೆಯರು ರಕ್ತ ಹೀನತೆ ಹಾಗೂ ಮಕ್ಕಳ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಅಲ್ಲದೆ ತಾಯಿ ಹಾಗೂ ಶಿಶು ಮರಣ ಹೆಚ್ಚಾಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕಾದ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೋರಾಟಗಾರರೊಂದಿಗೆ ಈಗಾಗಲೇ ಆಪೌಷ್ಟಿಕತೆ ನಿವಾರಣೆಗೆ ಪ್ರಯೋಗಿಕ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ. ಆದರೆ ಯಾವುದೇ ಕಾರ್ಯಕ್ರಮ ಜಾರಿ ಮಾಡದೇ ಹಾರಿಕೆ ಉತ್ತರ ನೀಡುವ ಸಚಿವರ ಭರವಸೆ ವಿರುದ್ಧ ಆಕ್ರೋಶ ಹೊರಹಾಕಿದರು.

ಕಳೆದ 1 ವರೆ ವರ್ಷಗಳಲ್ಲಿ ಹೋರಾಟ ನಡೆಸಿ ನಾವು ಶಾಸಕರು ಮತ್ತು ಸಚಿವರಿಗೆ ಮನವಿ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಹುಸುಗೊಳಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ತಾಯಿ ಹಾಗೂ ಶಿಶು ಮರಣಗಳು ಸಂಭವಿಸುತ್ತಲಲೇ ಇವೆ ಆದರೆ ಸರಕಾರ ನಿರ್ಲಕ್ಷ್ಯ ಭಾವನೆ ತಾಳಿರುದು ಅತ್ಯಂತ ವಿಷಾದಕರ ಸಂಗತಿಯಾಗಿದೆ.

ಸರ್ಕಾರ ಕೂಡಲೇ ನಿರ್ಧಿಷ್ಟವಾದ ಕ್ರೀಯಾ ಯೋಜನೆಯನ್ನು ರೂಪಿಸಬೇಕು, ಸುಳ್ಳು ಆಶ್ವಾಸನೆಗಳನ್ನು ನೀಡದೆ, ನಿರ್ಧಿಷ್ಟ ಕ್ರಮ ಕೈಗೊಳ್ಳುವವರೆಗೆ ಅನಿರ್ದಿಷ್ಟ ಧರಣಿ ಮುಂದುವರೆಸಲಾಗುತ್ತದೆ ಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿದ್ಯಾ ಪಾಟೀಲ್, ಮೋಕ್ಷಮ್ಮ, ವಿರುಪಟ್ಟಿ, ರೇಣುಕಾ, ಗುರುರಾಜ, ಹನುಮೇಶ, ಮಾರೆಮ್ಮ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net