ಬಳ್ಳಾರಿ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ವಿಫಲ ವಿರೋಧಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಜೆಡಿಎಸ್ ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಮಾತನಾಡಿ, ಕಾಂಗ್ರೆಸ್‌ನ ಹಾಲಿ ಶಾಸಕರು ಮತ್ತು ಮುಖಂಡರು ಸಚಿವರ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆ ಬಿಡುಗಡೆಗೊಳಿಸಿ ಭ್ರಷ್ಟಚಾರದ ಬಗ್ಗೆ ಆರೋಪಿಸಿದ್ದಾರೆ. ಅಲ್ಲದೆ, ಸರ್ಕಾರ ರಾಜ್ಯದಲ್ಲಿ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ದುರಸ್ತಿ ಹಾಗೂ ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.
ಈಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತ ಪ್ರಕರಣ ಸರ್ಕಾರವೇ ಹೊಣೆ ಹೊರಬೇಕು. ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ವಿರುದ್ಧ ಭ್ರಷ್ಟಚಾರ ಆರೋಪ ಕೇಳಿ ಬಂದಿದ್ದು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಬಳಿಕ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.