ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಎಸ್‌ಡಿಪಿಐ ತಾಲೂಕು ಸಮಿತಿ ಕಾರ್ಯಕರ್ತರು ಬೇಲೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಎಸ್‌ಡಿಪಿಐ ತಾಲೂಕು ಸಮಿತಿ ಕಾರ್ಯಕರ್ತರು ಬೇಲೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
Published on

ಬೇಲೂರು: ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ತಾಲೂಕು ಸಮಿತಿ ಕಾರ್ಯಕರ್ತರು ಶುಕ್ರವಾರ ತಾಲೂಕು ಕಚೇರಿ ಮುಂಭಾಗ ತಿದ್ದುಪಡಿ ಮಸೂದೆ ಬಿಲ್ ಪ್ರತಿಯನ್ನು ಹರಿದು ಪ್ರತಿಭಟಿಸಿದರು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವುದು ಅಸಾಂವಿಧಾನಿಕ. ವಕ್ಫ್ ಸಂಪತ್ತನ್ನು ಕಬಳಿಸುವ ಕೋಮುವಾದಿ ಸರ್ಕಾರದ ಹುನ್ನಾರವಾಗಿದೆ. ಜತೆಗೆ ಜಿಲ್ಲಾಧಿಕಾರಿಗೆ ನ್ಯಾಯಾಂಗ ಅಧಿಕಾರ ನೀಡುವುದು ಸಂಪೂರ್ಣವಾಗಿ ಅನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ಈ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ತೆಗೆದು ಕೊಳ್ಳದಿದ್ದರೆ ದೇಶದಾದ್ಯಂತ ಸಿಎಎ, ಎನ್‌ಆರ್‌ಸಿ ಮಾದರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಸಿದರು.

ಭಾರತದ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸಲು ನಾವು ಇಂದು ಇಲ್ಲಿ ಸೇರಿಲ್ಲ. ಮೋದಿ ಸರ್ಕಾರ ಈ ಮಸೂದೆ ಮೂಲಕ ವಕ್ಫ್ ಬೋರ್ಡ್ ಮೇಲೆ ಬಲವಂತವಾಗಿ ಹಿಂದುತ್ವ ಹೇರಲು ಯತ್ನಿಸುತ್ತಿದೆ. ಇದು ಧಾರ್ಮಿಕ ಸ್ವಾತಂತ್ರೃ ಮತ್ತು ಸ್ವಾಯತ್ತತೆಗೆ ವಿರುದ್ಧವಾಗಿದೆ. ಅಲ್ಲದೆ ವಕ್ಫ್ ಕಾಯ್ದೆಯ ಅನುಷ್ಠಾನವನ್ನು ಕೇಂದ್ರ ಸರ್ಕಾರ ತನ್ನ ಬಹುಮತದ ಬಲದಿಂದ ದುರುಪಯೋಗ ಪಡಿಸಿಕೊಂಡು ದೇಶವನ್ನು ಕೇಸರಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿಯೊಂದಿಗೆ ವಕ್ಫ್ ಸಂಸ್ಥೆಗಳ ಶಕ್ತಿ ಕುಂದಿಸುವ ಯತ್ನ ನಡೆಯುತ್ತಿವೆ. ಹಾಗಾಗಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬೇಲೂರು ಕ್ಷೇತ್ರ ಸಮಿತಿ ಅಧ್ಯಕ್ಷ ಹರ್ಷದ್. ಕೋಟೆ ಜಾಮಿಯ ಮಸೀದಿ ಅಧ್ಯಕ್ಷ ರಫೀಕ್ ಅಹ್ಮದ್, ಎಸ್‌ಡಿಪಿಐ ಮುಖಂಡರಾದ ಇಮ್ರಾನ್ ಶಜೀಲ್ ಅಹ್ಮದ್, ಫೈರೋಜ್ ಪಾಶ, ಸಫಿರ್, ಏಜಾಸ್ ಪಾಷಾ. ತಜಮುಲ್ ಪಾಷಾ. ನಾಗೇನಹಳ್ಳಿ ಮುಜೀಬ್ ಫಾಸಿಲ್ ಅಕ್ಬರ್ ಸಮೀರ್ ಇತರರಿದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net